Advertisement

ಸಿಂದಗಿಯಲ್ಲಿ ಯಡಿಯೂರಪ್ಪ ಪ್ರಚಾರ ಆರಂಭ

11:35 PM Oct 20, 2021 | Shreeram Nayak |

ಸಿಂದಗಿ: ಒಂದು ಕಾಲದಲ್ಲಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಹಣ, ಹೆಂಡ, ತೋಳ್ಬಲ ಹಾಗೂ ಜಾತಿ, ಬಲದಿಂದ ಗೆದ್ದು ಸರ್ವಾ ಧಿಕಾರ ನಡೆಸುತ್ತಿತ್ತು. ಜನರು 65 ವರ್ಷ ಕಾಂಗ್ರೆಸ್‌ ಪಕ್ಷದ ದುರಾಡಳಿತ, ಅವರ ನಿಜವಾದ ಬಣ್ಣವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಬುಧವಾರ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಸಿಂದಗಿ ಉಪಚುನಾವಣೆ ಪ್ರಚಾರ ನಿಮಿತ್ತ ಹಮ್ಮಿಕೊಂಡ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ನನ್ನ ಅಧಿಕಾರದ ಅವಧಿಯಲ್ಲಿ ಅನೇಕ ಸುಧಾರಣೆ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇನೆ. ಬೊಮ್ಮಾಯಿ ಅವರೂ ಅಭಿವೃದ್ಧಿ ಪರವಾದ ಆಡಳಿತ ನಡೆಸುತ್ತಿದ್ದಾರೆ. ಆದ್ದರಿಂದ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್‌, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

Advertisement

ವಿವಿಧ ಮಠಗಳಿಗೆ ಸಿಎಂ ಭೇಟಿ
ಹಾನಗಲ್‌: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧರಾತ್ರಿ ರಾತ್ರಿ ವರ್ದಿ, ನರೇಗಲ್‌, ಮಾರಂಬೀಡ ಗ್ರಾಮಗಳ ವಿವಿಧ ಮಠಗಳಿಗೆ ತೆರಳಿ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡರು. ಬುಧವಾರ ಸಂಜೆ ವೇಳೆಗೆ ಕ್ಷೇತ್ರದ ವಿವಿಧ ಭಾಗದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ ಕೈಗೊಳ್ಳಬೇಕಿತ್ತು. ಆದರೆ, ಬೆಂಗಳೂರಿನಿಂದ ಆಗಮಿಸುವುದು ವಿಳಂಬವಾದ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರ ರದ್ದುಗೊಳಿಸಿ ಮಠಗಳಿಗೆ ಭೇಟಿ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next