Advertisement

ಯಡಿಯೂರಪ್ಪ ಸರಕಾರ ಯಾರನ್ನು ಹಸಿವಿನಿಂದ ಇರಲು ಬಿಡುವುದಿಲ್ಲ: ಸಚಿವ ಸೋಮಣ್ಣ

05:32 PM Dec 13, 2020 | Mithun PG |

ಬೆಳ್ತಂಗಡಿ: ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವುದು ತಪ್ಪಲ್ಲ, ಆದರೆ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಯಡಿಯೂರಪ್ಪ ಸರಕಾರ ಯಾರನ್ನು ಹಸಿವಿನಿಂದ ಇರಲು ಬಿಡುವುದಿಲ್ಲ ಎಂದು ವಸತಿ ಸಚಿವ ಸೋಮಣ್ಣ ಹೇಳಿಕೆ ನೀಡಿದ್ದಾರೆ.

Advertisement

ಧರ್ಮಸ್ಥಳ ಲಕ್ಷದೀಪೋತ್ಸವ ಸರ್ವಧರ್ಮ ಸಮ್ಮೇಳನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಧರ್ಮಸ್ಥಳ ಭೇಟಿ ನೀಡಿ, ರಾಜ್ಯಾದ್ಯಂತ ಸಾರಿಗೆ ನೌಕರರ ಪ್ರತಿಭಟನೆ ವಿಚಾರವಾಗಿ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಪ್ರತಿ ತಿಂಗಳ ವೇತನ ಬಿಡುಗಡೆ ಮಾಡುವುದು ಎಷ್ಟು ಕಷ್ಟ ಅಂತ ಎಲ್ಲರಿಗೂ ತಿಳಿದಿದೆ.  ಇದು ಹೋರಾಟ ಇವತ್ತಿನದಲ್ಲ. ತುಂಬಾ ವರ್ಷಗಳ ಹೋರಾಟ. ಆದರೆ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಮೂರು ತಿಂಗಳ ಸಂಬಳ ಬಿಡುಗಡೆ ಮಾಡಿದ್ದಾರೆ.

ಎಲ್ಲವನ್ನೂ ಕುಳಿತು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಲಾಗುವುದು. ಇಂದು ಸಂಜೆಯ ಒಳಗಡೆ ಸಮಸ್ಯೆ ಇತ್ಯರ್ಥವಾಗುವ ಸಾಧ್ಯತೆ ಇದೆ. ನಾನು ಒಬ್ಬ ಸರಕಾರಿ ನೌಕರನಾಗಿ ದುಡಿದ ಅನುಭವ ಇದೆ. ಹೀಗಾಗಿ ಸಾರಿಗೆ ನೌಕರರು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ದೇಶ-ವಿದೇಶಗಳಲ್ಲಿ 30,000 ಗಂಟೆ ಉಪನ್ಯಾಸ ಪ್ರವಚನಗೈದ ದಾಖಲೆ: ಬನ್ನಂಜೆ ಸಾಧನೆಯ ಹಾದಿ !

Advertisement

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಇದಕ್ಕೂ ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next