Advertisement

ಎಫ್ಐಆರ್‌ ರದ್ದುಗೊಳಿಸಲು ಯಡಿಯೂರಪ್ಪ ಹೈಕೋರ್ಟ್‌ ಮೊರೆ

03:45 AM Jul 04, 2017 | Team Udayavani |

ಬೆಂಗಳೂರು: ನಗರದಲ್ಲಿ ನಡೆದ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐರ್‌ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಆರ್‌.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದಲ್ಲಿ 
ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ವಿರುದ್ಧ ಎಫ್ ಐಆರ್‌ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.

Advertisement

ಪ್ರಕರಣದ ಪ್ರತಿವಾದಿ ಲೋಕಾಯುಕ್ತ ಪೊಲೀಸರು ಹಾಗೂ ದೂರುದಾರ ಜಯಕುಮಾರ್‌ ಹಿರೇಮs… ಅವರಿಗೆ
ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಜು.6ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next