Advertisement

ಯಡಿಯೂರಪ್ಪ ಕಡೆಗಣನೆ ಸಲ್ಲದು: ರಾಜ್ಯಾಧ್ಯಕ್ಷರಿಗೆ ಪತ್ರ

11:05 PM Sep 27, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಕಡೆಗಣಿಸಿ ಅಥವಾ ವಿರೋಧಿಸಿ ಪಕ್ಷ ಸಂಘಟನೆಗೆ ಮುಂದಾದರೆ ಉತ್ತರ ಕರ್ನಾಟಕದ 13 ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರಿಯಾದ ಪಾಠ ಕಲಿಸುತ್ತೇವೆ ಎಂದು ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ್‌ ಪಾಟೀಲ್‌ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

Advertisement

ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಪತ್ರ ಬರೆದಿದ್ದು, ಹೊಸದಾಗಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದ್ದೀರಿ, ಅರ್ಹತೆ ಮತ್ತು ಯೋಗ್ಯತೆ ಇಲ್ಲದವರ ಮಾತು ಕೇಳಿಕೊಂಡು ಪಕ್ಷ ಸಂಘಟನೆಯಲ್ಲಿ ಬಿಎಸ್‌ವೈ ಅವರನ್ನು ಕಡೆಗಣಿಸಿದ್ದೆ ಆದರೆ, ನನ್ನನ್ನು ಸೇರಿದಂತೆ ಉತ್ತರ ಕರ್ನಾಟಕ 13 ಜಿಲ್ಲೆಗಳ ಪಕ್ಷದ ನಿಷ್ಟಾವಂತ ಸಾವಿರಾರು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಯಡಿಯೂರಪ್ಪನವರಿಗೆ ಇಲ್ಲಿಯವರೆಗೆ ಕೊಟ್ಟ ಕಾಟ ಸಾಕು. ಮುಂದೆ ಪಕ್ಷ ಅಧಿಕಾರಕ್ಕೆ ಬರಬೇಕು ಎನ್ನುವುದಾದರೆ ನೀವು ಸೇರಿದಂತೆ ಇನ್ನು ಅನೇಕರು ಬಿ.ಎಸ್‌. ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next