Advertisement

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ: ಪಾಟೀಲ ವಿಶ್ವಾಸ

12:10 PM Mar 04, 2018 | Team Udayavani |

ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಏಶಿಯನ್‌ ಮಾಲ್‌ ಹತ್ತಿರ ಹಮ್ಮಿಕೊಂಡ ಬಿಜೆಪಿ ಕಮಲಜಾತ್ರೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಬಿಜೆಪಿ ಪರವಾದ ಅಲೆಯಿದ್ದು, ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

Advertisement

ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಸಾಧನೆಗಳು ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವೈಫಲ್ಯ ತಿಳಿಸುವ ಉದ್ದೇಶದಿಂದ ಕಮಲಜಾತ್ರೆ ಹಮ್ಮಿಕೊಳ್ಳಲಾಗಿದೆ. ಜನರು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಕಮಲ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಭ್ರಮಿಸಬೇಕು ಎಂದು ಅವರು ಮನವಿ ಮಾಡಿದರು.

ಮಾಜಿ ಸಚಿವ ರೇವೂ ನಾಯಕ ಬೆಳಮಗಿ, ರಾಜ್ಯ ವಿಧಾನ ಪರಿಷತ್‌ ಮಾಜಿ ಸದಸ್ಯ ಶಶೀಲ ಜಿ. ನಮೋಶಿ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಆರ್‌.ಎಸ್‌. ಪಾಟೀಲ, ಪಾಲಿಕೆ ಸದಸ್ಯರಾದ ಪರಶುರಾಮ ನಸಲವಾಯಿ, ನಾಗರಾಜ ಗುಂಡಗುರ್ತಿ, ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಮಹಾಂತಗೌಡ ಪಾಟೀಲ, ಪಾಲಿಕೆ ಮಾಜಿ ಸದಸ್ಯ ರಾಜು ವಾಡೇಕರ್‌, ಅಪ್ಪು ಕಣಕಿ, ಶಿವು ಸ್ವಾಮಿ, ಜಿಪಂ ಮಾಜಿ ಸದಸ್ಯ ರಾಜೇಂದ್ರ ಕರೆಕಲ್‌, ವಿಜಯಲಕ್ಷ್ಮೀ ಗೊಬ್ಬೂರ, ವಿದ್ಯಾಸಾಗರ ಶಾಬಾದಿ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next