Advertisement

ಯಡಿಯೂರಪ್ಪ ಅವರನ್ನು ಎಂದಿಗೂ ಮರೆಯಲಾರೆ

11:54 AM Jun 25, 2018 | Team Udayavani |

ಬೆಂಗಳೂರು: “ಕಾಂಗ್ರೆಸ್‌ನಿಂದ ತುಳಿತಕ್ಕೊಳಗಾಗಿದ್ದ ನನ್ನನ್ನು ಗುರುತಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಬಿಜೆಪಿಗೆ ಕರೆತಂದು ಸೂಕ್ತ ಸ್ಥಾನಮಾನ ನೀಡಿದ್ದಾರೆ. ಅವರನ್ನು ನಾನು ಎಂದಿಗೂ ಮರೆಯುವುದಿಲ್ಲ,’ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ ಹೇಳಿದರು.

Advertisement

ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಭಾನುವಾರ ಆರ್‌ಬಿಐ ಲೇಔಟ್‌ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಇಂದಿಗೂ ಹಲವಾರು ಹಿಂದುಳಿದ ಸಮುದಾಯಗಳು ತುಳಿತಕ್ಕೊಳಗಾಗಿವೆ. ಈ ನಿಟ್ಟಿನಲ್ಲಿ ನಾನು ಇರುವಷ್ಟು ದಿನ ವಿಶ್ವಕರ್ಮ ಸೇರಿದಂತೆ ಎಲ್ಲ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ತೊಡಗಲಿದ್ದೇನೆ ಎಂದರು.  

ಶಾಸಕ ಕೃಷ್ಣಪ್ಪ ಮಾತನಾಡಿ, ನಂಜುಂಡಿ ಅವರನ್ನು ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಅವರು ಮತ್ತಷ್ಟು ಸಾಮಾಜಿಕ ಸೇವೆ ಮಾಡಲಿ ಎಂದರು. ಕಾರ್ಯಕ್ರಮದಲ್ಲಿ  ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next