Advertisement

ಯಡಿಯೂರಪ್ಪ, ಮಕ್ಕಳಿಗೆ ನೋಟಿಸ್‌

08:50 AM Aug 04, 2017 | Harsha Rao |

ಬೆಂಗಳೂರು: ಅಧಿಕಾರ ದುರ್ಬಳಕೆ, ಅರಣ್ಯ ಜಮೀನು ಒತ್ತುವರಿ, ಡಿನೋಟಿಫಿಕೇಶನ್‌ ಆರೋಪದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಅಧೀನ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮಾಜಿ ಸಿಎಂ
ಬಿ.ಎಸ್‌.ಯಡಿಯೂರಪ್ಪ ಹಾಗೂ ಅವರ ಮಕ್ಕಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ಶಿವಮೊಗ್ಗದ ವಕೀಲ ವಿನೋದ್‌. ಬಿ ಸಲ್ಲಿಸಿದ್ದ ಕ್ರಿಮಿನಲ್‌ ಪುನರ್‌ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಮೂರು ಪ್ರತ್ಯೇಕ ಅರ್ಜಿಗಳಲ್ಲಿ ಪ್ರತಿವಾದಿಗಳಾಗಿರುವ ಯಡಿಯೂರಪ್ಪ, ಅವರ ಮಕ್ಕಳಾದ ಎಸ್‌.ವೈ ಅರುಣಾ ದೇವಿ, ವಿಜಯೇಂದ್ರ, ರಾಘವೇಂದ್ರ ಹಾಗೂ ಇತರ
ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಯಡಿಯೂರಪ್ಪ ಅಧಿಕಾರ ದುರ್ಬಳಕೆ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಮಗಳು ಅರುಣಾದೇವಿಗೆ ಕೆಎಚ್‌ಬಿಯಿಂದ ನಾಲ್ಕು ನಿವೇಶನ ಕೊಡಿಸಿದ್ದಾರೆ.

ಅಲ್ಲದೆ ಶಿವಮೊಗ್ಗ ಜಿಲ್ಲೆಯ ಹುಣಸೇಕಟ್ಟೆಯಲ್ಲಿ ಅರಣ್ಯ ಪ್ರದೇಶ ಒತ್ತುವರಿ ಹಾಗೂ ಕೋಟೆಗಂಗೂರು ಗ್ರಾಮದಲ್ಲಿ
ಜಮೀನು ಡಿನೋಟಿμಕೇಶನ್‌ ಪ್ರಕರಣಗಳ ಸಂಬಂಧ ಶಿವಮೊಗ್ಗ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಯಡಿಯೂರಪ್ಪ ಹಾಗೂ ಅವರ ಮಕ್ಕಳಿಗೆ ಕ್ಲೀನ್‌ಚಿಟ್‌ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ದೂರುದಾರರಾದ
ವಕೀಲ ಬಿ. ವಿನೋದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next