Advertisement

ಬಿಎಸ್‌ವೈ, ರೇಣುಕಾಚಾರ್ಯ ವಿರುದ್ಧ ದೂರು: ಕಾಂಗ್ರೆಸ್‌ 

03:45 AM Apr 09, 2017 | Team Udayavani |

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಚುನಾ ವಣಾ ನೀತಿ ಸಂಹಿತೆ ಉಲ್ಲಂಘಿ  ಸಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

Advertisement

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌. ಎಸ್‌. ಭೋಸರಾಜ್‌ ನೇತೃತ್ವದ ಕಾಂಗ್ರೆಸ್‌ ನಿಯೋಗ, ಶನಿವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್‌ ಕುಮಾರ್‌ ಝಾರನ್ನು ಭೇಟಿಯಾಗಿ ಲಿಖೀತ ದೂರು ಸಲ್ಲಿಸಿತು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಗಾಲ ಹೋಬಳಿಯ ವಡ್ಡನಹೊಸಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಮೃತ ರೈತನ ಪತ್ನಿಗೆ ಒಂದು ಲಕ್ಷ ರೂ. ನಗದು ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ. 

ಈ ಸಂಬಂಧದ ವಿಡಿಯೋ ತುಣುಕುಗಳ ಸಾಕ್ಷ್ಯವನ್ನೂ ಮುಖ್ಯ ಚುನಾವಣಾಧಿಕಾರಿಯವರಿಗೆ ನೀಡಲಾಗಿದೆ. ಅಲ್ಲದೆ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ಬಿಜೆಪಿಯ ಐವರು ಕಾರ್ಯಕರ್ತರು ಐದು ಲಕ್ಷ ರೂ. ಹಣ ಒಯ್ಯುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಂಡು, ನಿಷ್ಪಕ್ಷಪಾತ ಚುನಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದೆ. ನಿಯೋಗದಲ್ಲಿ ಕಾಂಗ್ರೆಸ್‌ ಮುಖಂಡ ಜೆ.ಹುಚ್ಚಪ್ಪ ಹಾಗೂ ಶμàವುಲ್ಲಾ ಮತ್ತಿತರರು ಇದ್ದರು.

“ಕಾಂಗ್ರೆಸ್ಸಿಗರು ಹಣದಿಂದಲೇ ಚುನಾವಣೆ ನಡೆಸುತ್ತಿದ್ದಾರೆ’
ಶಿವಮೊಗ್ಗ: ಕಾಂಗ್ರೆಸ್ಸಿಗರು ಕೇವಲ ಹಣದಿಂದಲೇ ಚುನಾವಣೆ ನಡೆಸುತ್ತಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಈ ರೀತಿಯ ಚುನಾವಣೆ ಹಿಂದೆಂದೂ ನೋಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ ಮತದಾರರಿಗೆ ಹಣ ಹಂಚುತ್ತಾ ನಾನಾ ರೀತಿಯ ಆಮಿಷ ಒಡ್ಡುತ್ತಿದ್ದಾರೆ ಎಂದು ದೂರಿದರು. ಕಾರ್ಯಕರ್ತರಿಂದ ಹಣ ಸಂಗ್ರಹಿಸಿ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ಗುಂಡ್ಲುಪೇಟೆಯ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ.
ಆರ್ಥಿಕ ನೆರವು ನೀಡಿದ್ದೇನೆ. ಅದನ್ನೇ ಮಹಾಪರಾಧ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನ ಕೆಲ ನಾಯಕರು ಬಿಂಬಿಸತೊಡಗಿದ್ದಾರೆ. ತಮ್ಮ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next