Advertisement

ರಾಜ್ಯದಲ್ಲಿ 120 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳಿದ BSY

08:10 AM Mar 02, 2019 | Sharanya Alva |

ತುಮಕೂರು: ಇತ್ತೀಚೆಗೆ ಭಾರತ ಪಾಕ್ ಉಗ್ರರ ಮೇಲೆ ನಡೆಸಿದ್ದ ದಾಳಿ ಕುರಿತು ರಾಜಕೀಯ ಲಾಭದ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶನಿವಾರ, ಭಾರತೀಯ ಜನತಾ ಪಕ್ಷ ಕರ್ನಾಟಕದಲ್ಲಿ 120 ಸೀಟು ಗೆಲ್ಲುತ್ತದೆ ಎಂದು ಹೇಳುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ!

Advertisement

ತುಮಕೂರಿನಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸುವ ಭರದಲ್ಲಿ, ನಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಕ್ತಿ ಮೀರಿ ಕೆಲಸ ಮಾಡುವ ಮೂಲಕ ಕರ್ನಾಟಕದಲ್ಲಿ 120ಕ್ಕೂ(ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರ ಇರೋದು) ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕು ಎಂದಿದ್ದರು.

ದೇಶದಲ್ಲಿ 300ಕ್ಕೂ ಅಧಿಕ ಸ್ಥಾನ ಗಳಿಸಿ ಭಾರತೀಯ ಜನತಾ  ಪಕ್ಷ ಮತ್ತೆ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ತಿಳಿಸಿದ್ದರು. ಮುಂದಿನ ವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು ಈ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಟಿಕೆಟ್ ಹಂಚಿಕೆ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next