Advertisement

ಕೊಂಕಣಿ ಖಾರ್ವಿ ಭವನಕ್ಕೆ  ಯಡಿಯೂರಪ್ಪ  ಭೇಟಿ

09:00 AM Nov 14, 2017 | Team Udayavani |

ಕುಂದಾಪುರ: ಹೊಸಾಡು – ತ್ರಾಸಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೊಂಕಣಿ ಖಾರ್ವಿ ಭವನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸೋಮವಾರ ಭೇಟಿ ನೀಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರಕಾರ ಹಾಗೂ ದಾನಿಗಳ ನೆರವಿನಿಂದ ನಿರ್ಮಿಸಲಾಗಿರುವ ಸುಸಜ್ಜಿತ ಕೊಂಕಣಿ ಖಾರ್ವಿ ಶೈಕ್ಷಣಿಕ ಸಾಂಸ್ಕೃತಿಕ ಸಮುದಾಯ ಭವನದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕು. ಹಿಂದುಳಿದ ಖಾರ್ವಿ ಸಮಾಜದ ಅಭಿವೃದ್ಧಿಗಾಗಿ ಬಿಜೆಪಿ ಸರಕಾರ ಒಂದು ಕೋಟಿ ರೂ. ಅನುದಾನ ನೀಡಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದರು.

ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅಖೀಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಅಧ್ಯಕ್ಷ ಕೆ.ಬಿ. ಖಾರ್ವಿ ಕುಂದಾಪುರ, ಪ್ರಧಾನ ಕಾರ್ಯದರ್ಶಿ ಉಮಾನಾಥ ಗಂಗೊಳ್ಳಿ, ರವಿ ಟಿ. ನಾಯ್ಕ, ಪ್ರಕಾಶ ಖಾರ್ವಿ ಕುಂದಾಪುರ, ದಿನಕರ ಪಟೇಲ್‌, ಸೂರ್ಯಕಾಂತ ಖಾರ್ವಿ, ಜಿ. ಗಣಪತಿ ಶಿಪಾç, ನಾಗರಾಜ ಖಾರ್ವಿ ಕೊಲ್ಲೂರು, ಮಾಧವ ಖಾರ್ವಿ ಕಂಚುಗೋಡು, ನಾಗಪ್ಪಯ್ಯ ಪಟೇಲ್‌, ಸುರೇಖಾ ಕಾನೋಜಿ, ಕೃಷ್ಣ ಖಾರ್ವಿ ಕಂಚುಗೋಡು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next