Advertisement

ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ : ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ

03:24 PM Jul 29, 2020 | mahesh |

ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಯಾವ ಬದಲಾವಣೆಯೂ ಇಲ್ಲ, ಬಿ.ಎಸ್.‌ ಯಡಿಯೂರಪ್ಪನವರೇ ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

Advertisement

ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಾಮಾಜಿಕ‌ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅವರನ್ನು ಬಿಂಬಿಸಲಾಗುತ್ತಿದೆ. ಹೀಗಾಗಿ ಈ ಕುರಿತು ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ ಸವದಿ, ತಾವು ರಾಜ್ಯಪಾಲ ವಜೂಬಾಯಿ ವಾಲಾ ಅವರ ಆರೋಗ್ಯ ವಿಚಾರಿಸಲು ಭೇಟಿಯಾಗಿದ್ದು ಮತ್ತು ದೆಹಲಿಗೆ ಬಂದಿದ್ದು ಎರಡೂ ಕೂಡ ಕಾಕತಾಳೀಯ ಎಂದರು.

ರಾಜ್ಯ ಬಿಜೆಪಿ ಸರಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಸಿಹಿ ನೀಡಿದ್ದೇನೆ, ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಕ್ಕಿಲ್ಲ. ದೆಹಲಿ ಭೇಟಿಗೆ ಯಾವುದೇ ರೆಕ್ಕೆ ಪುಕ್ಕ ಕಟ್ಟುವ ಅವಶ್ಯಕ ಇಲ್ಲ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next