Advertisement

ಯಡಿಯೂರಪ್ಪ 79 ನೇ ಜನ್ಮ ದಿನಾಚರಣೆ:ವಿಶೇಷ ಪೂಜೆ, ರೈತ ಪರ ಕಾಳಜಿ

10:41 AM Feb 27, 2022 | Team Udayavani |

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾನುವಾರ 79 ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಮತ್ತು ಅವರ ಅಭಿಮಾಜಿಗಳು ಹಲವೆಡೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ.

Advertisement

ಬಿಎಸ್ ವೈ ಅವರು ಬೆಳಗ್ಗೆ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಿವಾಸದಲ್ಲಿ, ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಬೃಹತ್ ಕೇಕ್ ಕತ್ತರಿಸಿ ಜನ್ಮದಿನ ಸಂಭ್ರಮದಲ್ಲಿ ಭಾಗಿಯಾದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ

ಯಡಿಯೂರಪ್ಪ ಅವರ ಹುಟ್ಟು ಹಬ್ಬದ ಅಂಗವಾಗಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ‌ಕ್ಷೇತ್ರದ ನಂದಿನಿ ಬಡಾವಣೆಯಲ್ಲಿರುವ ಎಸ್.ಜಿ.ಇಂಟರ್ ನ್ಯಾಷನಲ್ ಸ್ಕೂಲ್ ಮುಂಭಾಗದ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಹಾಗೂ ಅಂಗವಿಕಲರಿಗೆ ಚಕ್ರವಾಹನ ಗಳನ್ನು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ, ಎಸ್.ಹರೀಶ್, ರಾಘವೇಂದ್ರ ಶೆಟ್ಟಿ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಹಾರ ತುರಾಯಿ ಬೇಡ

Advertisement

ಆತ್ಮೀಯರೇ, ಹಿತೈಷಿಗಳೇ, ಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ, ನಾಳೆ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಕೋರುತ್ತೇನೆ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ. ಎಂದು ಕೇಳಿಕೊಂಡಿದ್ದರು.

ದೇವರು ಶಕ್ತಿ ಕೊಡಬೇಕು

ರೈತ ನಾಯಕ, ಸಂಘಟನೆಗೆ ಶಕ್ತಿ ತುಂಬಿದ ನಾಯಕರಿಗೆ 79 ನೇ ಜನ್ಮ ದಿನಾಚರಣೆ ಆಚರಿಸುತ್ತಿದ್ದು, ಆರೋಗ್ಯ ಹಾಗೂ ನಾಡನ್ನು ನಡೆಸುವ ಶಕ್ತಿ ದೇವರು ಕೊಡ್ಬೇಕು ಎಂದು ಪುತ್ರ, ಸಂಸದ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.

ಹೋರಾಟ, ರೈತರ ಏಳಿಗೆಗೆ ಕೆಲಸ ಮಾಡಿದವರು ಹೀಗಾಗಿ ಜನರು ಬಂದು ಹರಸುತ್ತಿದ್ದಾರೆ . ಶಿಕಾರಿಪುರದಲ್ಲಿ ಮಾರ್ಚ್ 5 ರಂದು ಸನ್ಮಾನ ಸಮಾರಂಭ ಇಟ್ಟುಕೊಂಡಿದ್ದೇವೆ. ಶಿವಮೊಗ್ಗ ಕ್ಷೇತ್ರಕ್ಕೆ ನೀರಾವರಿ ಯೋಜನೆಗಳನ್ನ ಸಾಕಷ್ಟು ನೀಡಿದ್ದಾರೆ. ಹೀಗಾಗಿ ಅಭಿನಂದನಾ ಸಮಾರಂಭ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಸಚಿವರುಗಳು ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next