Advertisement

ಚುನಾವಣೆವರೆಗೂ ಮೈತ್ರಿ ಸರ್ಕಾರ ಇರೋದು ಡೌಟ್‌: ಯಡಿಯೂರಪ್ಪ

12:30 AM Feb 26, 2019 | Team Udayavani |

ಹಾವೇರಿ: ಕಾಂಗ್ರೆಸ್‌-ಜೆಡಿಎಸ್‌ ಒಡೆದ ಮನೆಯಾಗಿದೆ. ಮೈತ್ರಿ ಸರ್ಕಾರ ಲೋಕಸಭೆ ಚುನಾವಣೆವರೆಗಾದರೂ ಇರುತ್ತದೆಯೋ ಇಲ್ಲವೋ ಎಂಬ ಅನುಮಾನವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಶಂಕೆ ವ್ಯಕ್ತಪಡಿಸಿದ್ದಾರೆ.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಪ್ಪತ್ತಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಎಂದು ಒಪ್ಪುತ್ತಿಲ್ಲ. ಸಿದ್ದರಾಮಯ್ಯನವರೇ ತಮ್ಮ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಡಿಸಿಎಂ ಪರಮೇಶ್ವರ್‌ ತಮಗೆ ಮೂರು ಬಾರಿ ಸಿಎಂ ಸ್ಥಾನ ತಪ್ಪಿಸಲಾಗಿದೆ ಎನ್ನುತ್ತಿದ್ದಾರೆ. ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನದ ಭುಗಿಲೆದ್ದಿದೆ. ನಾಯಕರ ನಡುವೆಯೇ ಕಚ್ಚಾಟ ಪ್ರಾರಂಭವಾಗಿದೆ. ಮುಂದೆ ಏನಾಗಬಹುದು ಎಂಬುದನ್ನು ನೀವೇ ಕಾದು ನೋಡಿ ಎಂದರು.

ಚುನಾವಣಾ ಪ್ರಚಾರಕ್ಕೆ ಹಾವೇರಿಗೆ ರಾಹುಲ್‌ ಗಾಂಧಿ ಬರಲಿ ಅಥವಾ ಸೋನಿಯಾ ಗಾಂಧಿ ಬರಲಿ ಇಲ್ಲವೇ ಅಳಿದುಳಿದ ಕಾಂಗ್ರೆಸ್‌ ನಾಯಕರು ಯಾರು ಬಂದರೂ ಯಾವುದೇ ಪ್ರಯೋಜನವಾಗಲ್ಲ. ಯಾರೇ ಬಂದರೂ ಶಿವಕುಮಾರ ಉದಾಸಿ ಅವರನ್ನು ಸೋಲಿಸಲು ಆಗಲ್ಲ. ಕನಿಷ್ಠ  ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಗೆಲ್ಲುವುದು ನಿಶ್ಚಿತ ಎಂದರು.

ಇನ್ನು ಮೈಲಾರ ಲಿಂಗೇಶ್ವರದ ಕಾರ್ಣಿಕ  “ಕಬ್ಬಿಣದ ಸರಪಳಿ ಹರದಿತಲೇ ಪರಾಕ್‌’ ನುಡಿ ಗೊರವಜ್ಜನವರ ಬಾಯಲ್ಲಿ ಬಂದಿರುವುದು ನಿಜವಾಗಲಿ, ಸಮ್ಮಿಶ್ರ ಸರ್ಕಾರ ಸರಿದು ಹೋಗಿ, ಜನರಿಗೆ ಒಳ್ಳೆಯದಾಗಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next