Advertisement

ಯಡಿಯೂರಪ್ಪನವರ ರಾಜ್ಯ ಪ್ರವಾಸ ಶೀಘ್ರದಲ್ಲೇ ಶುರು: ಬಿ.ವೈ.ವಿಜಯೇಂದ್ರ

06:30 PM Sep 29, 2022 | Team Udayavani |

ಕಲಬುರಗಿ: ಪಕ್ಷ ಮತ್ತಷ್ಟು ಸಂಘಟಿಸಲು ಅದರಲ್ಲೂ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ರಾಗಿರುವ ಬಿ.ಎಸ್. ಯಡಿಯೂರಪ್ಪನವರು ಶೀಘ್ರದಲ್ಲೇ ರಾಜ್ಯದ ಪ್ರವಾಸ ಶುರು ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

Advertisement

ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯದಾದ್ಯಂತ ಪ್ರವಾಸ ಮಾಡಿ ಕಳೆದ 40 ವರ್ಷಗಳಿಂದ ಬಿಜೆಪಿ ಪಕ್ಷವನ್ನು ಸಂಘಟಿಸುತ್ತಾ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದಿದ್ದಾರೆ. ಈಗಲೂ ಬಿ.ಎಸ್ ಯಡಿಯೂರಪ್ಪ ಅವರು ಪ್ರವಾಸಗೈದು ಪಕ್ಷ ಸಂಘಟಿಸಲಿದ್ದಾರೆ. ಸಾಮೂಹಿಕವಾಗಿ ಚುನಾವಣೆ ಎದುರಿಸಿ ಪಕ್ಷ ಮತ್ತೆ ಅಧಿಕಾರಕ್ಕೆ ತರಲಾಗುವುದು ಎಂದರು.

ಇದನ್ನೂ ಓದಿ : ಪಿಎಫ್‌ಐ ನನ್ನಿಂದಲೇ ಬೆಳೆದಿದ್ದು ಅನ್ನುವುದು ಸುಳ್ಳು: ಸಿದ್ದರಾಮಯ್ಯ ಕಿಡಿ

ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ದ ಎಷ್ಟೇ ಬೊಬ್ಬೆ ಹಾಕಿದರೂ ಬಿಜೆಪಿಯನ್ನು ಜನರಿಂದ ದೂರ ಮಾಡಲಿಕ್ಕಾಗುವುದಿಲ್ಲ. ಪೇಸಿಎಂ ಕಾಂಗ್ರೆಸ್ ಗೆ ತಿರುಗುಬಾಣವಾಗಲಿದೆ ಎಂದರು.

ಪಿಎಫ್ಐ ನಿಷೇಧ ಸ್ವಾಗತಾರ್ಹ
ನವರಾತ್ರಿಯ ಶುಭಸಂದರ್ಭದಲ್ಲಿ ಪಿಎಫ್ಐ ನಿಷೇಧ ಮುಖಾಂತರ ಅತ್ಯುತ್ತಮ ನಿರ್ಧಾರ ಕೈಗೊಂಡಿದೆ. ಕಳೆದ ಹಲವಾರು ವರ್ಷಗಳಿಂದ ಪಿಎಫ್ ಐ ರಾಷ್ಟ್ರವಿರೋಧಿ ಚಟುವಟಿಕೆ ನಡೆಸಿಕೊಂಡು ಬಂದಿದೆ. ಅದರಲ್ಲೂರಾಜ್ಯದ ಹಾಗೂ ದೇಶದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮಾಡಿದೆ. ಒಂದು ಧರ್ಮದ ಯುವಕರನ್ನ ಅಡ್ಡದಾರಿಗೆ ತೆಗೆದುಕೊಂಡು ಹೋಗುವ ಕೆಲಸ ಪಿಎಫ್‌ಐ ಮಾಡಿದೆ. ಹತ್ಯೆ ಪ್ರಕರಣ ಸೇರಿದಂತೆ ಅನೇಕ ಕೃತ್ಯಗಳನ್ನ ಎಸಗಿದೆ. ಪಿಎಫ್‌ಐ ಕಾಂಗ್ರೆಸ್ ಪಕ್ಷದ ಪಾಪದ ಕೂಸು. ಇದನ್ನ ಸದೆಬಡೆಯುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ ಎಂದರು.

Advertisement

ಕೆ.ಜೆ ಹಳ್ಳಿ/ಡಿ.ಜೆ ಹಳ್ಳಿ ಯಲ್ಲಿ ಕಾಂಗ್ರೆಸ್ ಶಾಸಕನ ಮನೆಗೆ ಬೆಂಕಿ ಹಚ್ಚಿರುವ ಪ್ರಕರಣದಲ್ಲಿ ಪಿಎಫ್‌ಐ ಪಾತ್ರ ಎಷ್ಟರ ಮಟ್ಟಿಗೆ ಇತ್ತು ಅನ್ನೊದು ಗೋತ್ತಾಗಿದೆ. ಆದರೆ ಕಾಂಗ್ರೆಸ್‌ನ ಕೆಲ ಹಿರಿಯರು ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಅನ್ನುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆ ಮೂರ್ಖತನದ ಪರಮಾವಧಿಯಾಗಿದೆ. ಆರ್‌ಎಸ್‌ಎಸ್ ಅಂದರೆ ದೇಶ ಸಂಘಟನೆ ಮಾಡುವುದು ಎಂದರು.

ಸಿಎಂ ಬೊಮ್ಮಾಯಿ‌ಯವರು ಬಿಎಸ್‌ವೈ ಕೊಟ್ಟ ಕಾರ್ಯಕ್ರಮ ಮುಂದುವರಿಸಿಕೊಂಡು ಹೋಗುತ್ತಿದಾರೆ.‌ ಅಧಿಕಾರದಿಂದ ದೂರವಾಗಿರುವ ಕಾಂಗ್ರೆಸ್ ಪಕ್ಷ ಹೇಗಾದರೂ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಯತ್ನ ಮಾಡುತ್ತಿದೆ. ದಿನನಿತ್ಯ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ ಜನರನ್ನ ತಪ್ಪು ದಾರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ರಾಜ್ಯದಲ್ಲಿ/ರಾಷ್ಟ್ರದಲ್ಲಿ ಮತ್ತೊಮ್ಮೆ ಕೇಸರಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

ಕಾಂಗ್ರೆಸ್ ಎಷ್ಟೇ ಬೊಬ್ಬೆ ಹೊಡೆದು ಪಾದಯಾತ್ರೆ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ದ. ಕಾಂಗ್ರೆಸ್ ಗೆ ರಾಷ್ಟ್ರೀಯ ಅಧ್ಯಕ್ಷ ಸಿಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರ ಅಧ್ಯಕ್ಷ ಸಿದ್ದಾಜೀ ಪಾಟೀಲ್, ಮುಖಂಡರಾದ ಚಂದು ಪಾಟೀಲ್, ಹರ್ಷಾನಂದ ಗುತ್ತೇದಾರ ಈ ವೇಳೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next