Advertisement

ಯಡಿಯೂರಪ್ಪ-ಈಶ್ವರಪ್ಪ ಒಂದೇ ತಟ್ಟೆಯಲ್ಲಿ ಊಟ ಮಾಡಿದವರು, ಜೊತೆಯಲ್ಲೇ ಇದ್ದಾರೆ : ಅರುಣ್ ಸಿಂಗ್

06:28 PM Apr 08, 2021 | Team Udayavani |

ಮಂಗಳೂರು : ಯಡಿಯೂರಪ್ಪ ಮತ್ತು ಈಶ್ವರಪ್ಪ ಒಂದೇ ತಟ್ಟೆಯಲ್ಲಿ ಊಟ ಮಾಡಿದವರು, ಈಶ್ವರಪ್ಪ ಪತ್ರ ಬರೆದಿರುವುದು ನಿಜ. ಆದ್ರೆ ಇಬ್ಬರೂ ಪಕ್ಷದಲ್ಲಿ ಹಿರಿಯರು. ಇಬ್ಬರೂ ಜೊತೆಯಲ್ಲೇ ಇದ್ದಾರೆ ಎಂದು ಗುರುವಾರ ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.

Advertisement

ಬೆಳಗಾವಿ ಲೋಕಸಭಾ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನ ಸಭಾ ಚುನಾವಣೆಯ ಪ್ರಚಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.  ಈಶ್ವರಪ್ಪ ರಾಜ್ಯದ ಪ್ರಮುಖ ನಾಯಕರಾಗಿದ್ದಾರೆ, ಪಕ್ಷದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ ಎಂದರು.

ಮುಂದಿನ ಮೂರು ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸಲಿದ್ದೇನೆ. ಎರಡು ವಿಧಾನಸಭೆ ಒಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ನಾಯಕತ್ವದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲರೂ ಒಟ್ಟಾಗಿ ಪಕ್ಷದಲ್ಲಿದ್ದಾರೆ. ಎಲ್ಲರೂ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಈಶ್ವರಪ್ಪ ರಾಜ್ಯದ ಪ್ರಮುಖ ನಾಯಕರಾಗಿದ್ದಾರೆ ಪಕ್ಷದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ ಎಂದರು.

ಇನ್ನು ಕಾಂಗ್ರೆಸ್ ನವರು ಚುನಾವಣೆಗೆ ಷಡ್ಯಂತ್ರ ಮಾಡಿದ್ದಾರೆ. ಆದರೆ ಈ ಷಡ್ಯಂತ್ರದಿಂದ‌ ನಮಗೆ ಯಾವುದೇ ತೊಂದರೆ ಇಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಮತದ ಅಂತರದಿಂದ ಸೋಲುತ್ತದೆ ಎಂದು ಅರುಣ್ ಸಿಂಗ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next