Advertisement

BJP ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕಕ್ಕೆ ವರಿಷ್ಠರ ಮೇಲೆ ಒತ್ತಡ ಹಾಕುತ್ತೇವೆ: ಬಿಎಸ್ ವೈ

06:51 PM Nov 02, 2023 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಳಂಬವಾಗಿದೆ, ಈ ನೇಮಕಾತಿಗಳನ್ನು ಕೂಡಲೇ ಮಾಡಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲು ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

Advertisement

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ”ಪ್ರತಿಪಕ್ಷ ನಾಯಕರ ನೇಮಕದಲ್ಲಿ ವಿಳಂಬವಾಗಿದೆ, ಆದಷ್ಟು ಬೇಗ ನೇಮಕ ಮಾಡುವಂತೆ ಮನವಿ ಮಾಡಿದ್ದೇನೆ. ಡಿಸೆಂಬರ್‌ನಲ್ಲಿ ವಿಧಾನಸಭೆ ಅಧಿವೇಶನಕ್ಕೂ ಮುನ್ನ ನೇಮಕಾತಿ ಮಾಡುವಂತೆ ಒತ್ತಡ ಹೇರಲು ನಾನು ಎಲ್ಲ ಪ್ರಯತ್ನವನ್ನು ಮಾಡುತ್ತೇನೆ” ಎಂದರು.

”ರಾಜ್ಯಾಧ್ಯಕ್ಷ ಯಾರೇ ಆಗಲಿ ಆದಷ್ಟು ಬೇಗ ನೇಮಕವಾಗಬೇಕು ಎಂಬುದು ನಮ್ಮ ಬೇಡಿಕೆ. ನಾವು ಅದನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next