Advertisement

ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉತ್ತಮ ಕಾರ್ಯನಿರ್ವಹಣೆಗೆ ಕ್ರಮ: BSY

08:15 PM Feb 06, 2021 | Team Udayavani |

ಬೆಂಗಳೂರು-ರಾಜ್ಯದಲ್ಲಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಯೋಜನೆಗಳನ್ನು 2021-22ನೇ ಸಾಲಿನಿಂದ ಜಾರಿಗೆ ತರಲು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

Advertisement

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಏರ್ಪಡಿಸಿದ್ದ ಕನಾಟಕ ರಾಜ್ಯ ವೀಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ನಾಲ್ಕು ವರ್ಷಗಳಲ್ಲಿ ಮೊದಲ ಬಾರಿಗೆ ಇಂದು ಸಭೆ ನಡೆದಿದ್ದು, ಇನ್ನು ಮುಂದೆ ವರ್ಷಕ್ಕೆರಡು ಬಾರಿ ಸಭೆ ಏರ್ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವೀಕೇಂದ್ರಕರಣ ಯೋಜನಾ ಪ್ರಕ್ರಿಯೆಯ ಬಲವರ್ಧನಗೆ ಸರ್ಕಾರವು 2019ರಲ್ಲೇ ವಿವರವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಇದನ್ನು ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಪಾಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಜನರ ಬೇಡಿಕೆಗೆ ತಕ್ಕಂತೆ ಸರ್ಕಾರದ ಯೋಜನೆ ರೂಪಿಸಲು ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆ ಹಂತದಿಂದ, ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದ ವರೆಗಿನ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಇದನ್ನೂ ಓದಿ:ರೈತರ ಕಷ್ಟದ ಬಗ್ಗೆ ಗಾಯಕಿ ರಿಹಾನಾ ಗೆ ಗೊತ್ತಾ? ಕಿಡಿಕಾರಿದ ಸಚಿವ ಸದಾನಂದ ಗೌಡ

Advertisement

ಸಭೆಯಲ್ಲಿ ಸಮಿತಿಯ ಸದಸ್ಯರ ಅಭಿಪ್ರಾಯಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಗೆ ತಹಶೀಲ್ದಾರರನ್ನು ಸದಸ್ಯರನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಉಳಿದ ಸಲಹೆಗಳನ್ನು ರಾಜ್ಯದ ಹಣಕಾಸು ಪರಿಸ್ಥಿತಿಗೆ ಅನುಗುಣವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಸಮಿತಿಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಹಾಗೂ ಸಮಿತಿಯ ಸದಸ್ಯರು, ಯೋಜನಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಕಾರ್ಯದರ್ಶಿ ಉಮಾ ಮಹಾದೇವನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next