Advertisement

Yelburga: ಅಕ್ರಮ ಮದ್ಯ ಮಾರಾಟ ತಡೆಯಲು ಗ್ರಾಮಸ್ಥರ ಮನವಿ

06:59 PM Aug 12, 2024 | Team Udayavani |

ಯಲಬುರ್ಗಾ:ತಾಲೂಕಿನ ಮಲಕಸಮುದ್ರ ಗ್ರಾಮದಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮದ ಸ್ವಾಸ್ಥ್ಯ ಹಾಳಾಗುತ್ತಿದ್ದು ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಯಬೇಕು ಎಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ ಕಚೇರಿಯಯಲ್ಲಿ ತಹಸೀಲ್ದಾರ ಬಸವರಾಜ ತೆನ್ನಳ್ಳಿಗೆ ಮನವಿ ಸಲ್ಲಿಸಿದರು.

Advertisement

ನೇತೃತ್ವ ವಹಿಸಿ ಬ್ಲಾಕ್ ಕಾಂಗ್ರೇಸ್ ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಗೊಲ್ಲರ ಮಾತನಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ ಇದಕ್ಕೆ ಕಡಿವಾಣ ಹಾಕಿ, ಗ್ರಾಮದಲ್ಲಿ ಅಕ್ರಮ ಮಧ್ಯ ಸೇವನೆಯಿಂದ ಈಗಾಗಲೆ 6 ಜನರು ಮೃತ ಪಟ್ಟಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ನೆಮ್ಮದಿ ಇಲ್ಲದಂತಾಗಿದೆ ಗ್ರಾಮೀಣ ಭಾಗದಲ್ಲಿ ಚಿಲ್ಲರೆ ಅಂಗಡಿಗಳಾದ, ಚಹಾದಂಗಡಿ ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದು ಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಾದ್ಯಂತ ಕಳೆದ ಹಲವಾರು ವರ್ಷಗಳಿಂದ ಮಳೆಯು ಬಾರದೆ ದುಡಿಯುವ ಕೈಗಳಿಗೆ ಕೆಲಸ ಇಲ್ಲವಾಗಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆಯೂ ಇಲ್ಲದಾಗಿದೆ. ಜನರು ಆರ್ಥಿಕ ಸಂಕಷ್ಟದಲ್ಲಿದ್ದರೂ ಗ್ರಾಮೀಣ ಭಾಗದ ಕೆಲವರು ಗ್ರಾಮದಲ್ಲಿಯೇ ಸುಲಭವಾಗಿ ಸಿಗುವ ಮದ್ಯ ಸೇವನೆ ಚಟಕ್ಕೆ ಬಿದ್ದಿದ್ದಾರೆ. ಇದರಿಂದ ಮತ್ತಷ್ಟು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಭಾಗದ ಕೆಲವು ಗೂಡಂಗಡಿ, ಸಣ್ಣಪುಟ್ಟ ಮಾಂಸಾಹಾರಿ ಹೋಟೆಲ್‌ಗಳಲ್ಲಿ, ಕೆಲವರು ಮನೆಗಳಲ್ಲಿ, ಕಿರಾಣಿ ಅಂಗಡಿಗಳಲ್ಲಿಯು ಸಹ ಮದ್ಯ ಮಾರಾಟ ಕೇಂದ್ರವಾಗಿ ಮಾರ್ಪಟ್ಟಿದೆ. ಮದ್ಯ ಮಾರಾಟಕ್ಕೆ ಕೊನೇ ಇಲ್ಲವೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ, ಈ ಬಗ್ಗೆ ಗ್ರಾಮೀಣ ಭಾಗದಲ್ಲಿ ಕಠಿಣ ಕ್ರಮ ವಹಿಸದ ಪೊಲೀಸ್ ಮತ್ತು ಅಬಕಾರಿ ಇಲಾಖೆ ಆಗಾಗ ದಾಳಿ ನಡೆಸಿ ಪ್ರಕರಣ ದಾಖಲಿಸಿದರೂ ಅಕ್ರಮ ಮದ್ಯ ಮಾರಾಟಕ್ಕೆ ಕೊನೆ ಇಲ್ಲದಂತಾಗಿದೆ ಎಂಬುದು ಗ್ರಾಮೀಣ ಭಾಗದ ಮಹಿಳೆಯರು, ಯುವಕರು ಅಳಲು ತೋಡಿಕೊಳ್ಳುತಿದ್ದಾರೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಕುಡುಕರು ಹೆಚ್ಚಾಗಲು ಇಲಾಖೆಯವರೇ ಕಾರಣವಾಗಿದ್ದಾರೆ. ಅಬಕಾರಿ ಹಾಗೂ ಪೊಲೀಸ್ ಇಲಾಖೆ ಮೇಲಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರಿಯಪ್ಪ ಗುರಿಕಾರ, ಸಣ್ಣಈರಪ್ಪ ದಸ್ತಾನಿ ಬಾಲಪ್ಪ ಮಾರನಾಳ, ಉಮೇಶ ವಡ್ಡರ, ಮುದಕಪ್ಪ ಗೋಲ್ಲರ, ಸುಭಾಶ, ಕಲ್ಲಪ್ಪ ತೊಂಡಿಹಾಳ, ಈರಪ್ಪ ದಸ್ತಾನಿ, ಪ್ರಶಾಂತ ಕಮ್ಮಾರ ಶಿವೂ ಪೂಜಾರ, ಪರಶುರಾಮ ಕೆರಳ್ಳಿ, ಸಂತೋಷ ಗಡಾದ, ರಮೇಶ ಕುಡಗುಂಟಿ, ಮಾನಪ್ಪ ಹರಿಜನ, ಪರಸಪ್ಪ ಛಲವಾದಿ, ಸಣ್ಣರಾಮಣ್ಣ ಛಲವಾದಿ, ಶಿವು ಹರಿಜನ, ಹನಮಂತಪ್ಪ ಜಾಲಿಹಾಳ,ಹನಮಂತಪ್ಪ ಯಲಬುರ್ಗಾ ಹಾಗೂ ಗ್ರಾಮಸ್ಥರು ಸೇರಿದಂತೆ ಮತ್ತೀತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

ಯಲಬುರ್ಗಾ ತಾಲೂಕಿನ ಮಲಕಸಮುದ್ರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಕಡಿವಾಣ ಹಾಕುವಂತೆ ಆಗ್ರಹಿಸಿ ಪಟ್ಟಣದ ತಹಸೀಲ್ದಾರ ಕಚೇರಿಯಯಲ್ಲಿ ತಹಸೀಲ್ದಾರ ಬಸವರಾಜ ತೆನ್ನಳ್ಳಿಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next