Advertisement

Yellapura: ಸರಕು ತುಂಬಿದ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು

05:40 PM Jan 03, 2024 | Team Udayavani |

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಗಣಪತಿ ಕಟ್ಟೆ ಬಳಿ ಬುಧವಾರ ಸಂಭವಿಸಿದೆ.

Advertisement

ಸರಕು ತುಂಬಿಕೊಂಡು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ  ಹೋಗುತ್ತಿರುವಾಗ ಲಾರಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಹಿಟ್ಟಿನ ಮೂಟೆಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಚಾಲಕ, ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next