ಮಂಗಳೂರು: ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೊಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.
Advertisement
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ರವಿವಾರ ಬಿಸಿಲು ಮತ್ತು ಉರಿಸೆಕೆಯಿಂದ ಕೂಡಿತ್ತು. ಮಂಗಳೂರು ನಗರದಲ್ಲಿ ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 34.6 ಡಿ.ಸೆ. ಗರಿಷ್ಠ ಮತ್ತು 26 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.