Advertisement

ಮಂಗಳೂರು, ಉಡುಪಿಯಲ್ಲಿ ಮುಂದುವರಿದ ಮಳೆ; ಇಂದು ಎಲ್ಲೋ ಅಲರ್ಟ್‌

08:50 AM Oct 02, 2022 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಶನಿವಾರ ಮಳೆಯಾಗಿದೆ.

Advertisement

ಮಂಗಳೂರು ನಗರದಲ್ಲಿ ಬೆಳಗ್ಗೆ ಚದುರಿದ ಮಳೆ ಸುರಿದಿದೆ. ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾದ ವರದಿಯಾಗಿದೆ. ಉಡುಪಿ ಜಿಲ್ಲೆಯ ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಬೈಂದೂರು, ಕುಂದಾಪುರ, ಕಾಪು, ಹೆಬ್ರಿ, ಬ್ರಹ್ಮಾವರ, ಉಡುಪಿ ಭಾಗದಲ್ಲಿ ಬಿಟ್ಟುಬಿಟ್ಟು ಮಳೆಯಾಗಿದೆ. ಬೆಳಗ್ಗಿನಿಂದ ಮಧ್ಯಾಹ್ನವರೆಗೆ ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸುತ್ತಮುತ್ತ ನಿರಂತರ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಅ. 2ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ : ಟ್ರ್ಯಾಕ್ಟರ್ ಟ್ರಾಲಿ ಹಳ್ಳಕ್ಕೆ ಬಿದ್ದು 26 ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next