Advertisement
ಮಂಗಳೂರು ನಗರದಲ್ಲಿ ಬೆಳಗ್ಗೆ ಸುಮಾರು ಎರಡು ತಾಸುಗಳ ಕಾಲ ನಿರಂತರ ಮಳೆಯಾಗಿತ್ತು. ಬಳಿಕ ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸುರಿದಿದೆ. ತಗ್ಗು ಪ್ರದೇಶಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು. ಉಳಿದಂತೆ ಬಂಟ್ವಾಳ, ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿದಿತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 14ರಂದು ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ ಸುರಿಯಲಿದ್ದು, ಗಾಳಿಯ ವೇಗ, ಸಮುದ್ರದ ಅಬ್ಬರ ಕೂಡ ಇರುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶನಿವಾರ 30.8 ಡಿ.ಸೆ. ಗರಿಷ್ಠ ಮತ್ತು 24.8 ಡಿ.ಸೆ. ಕನಿಷ್ಠ ತಾಪಾಮಾನ ದಾಖಲಾಗಿತ್ತು.