ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮಳೆ ತುಸು ಕ್ಷೀಣಿಸಿದ್ದು, ದ.ಕ. ಮತ್ತು ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು.
ಸುಳ್ಯ: ಧಾರಾಕಾರ ಮಳೆ
ಸುಳ್ಯ: ಸುಳ್ಯ ಪೇಟೆ ಹಾಗೂ ತಾಲೂಕಿನ ವಿವಿಧೆಡೆ ಸೋಮವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆಯಾಗಿದೆ.
ಸುಳ್ಯ ನಗರ, ಐವರ್ನಾಡು, ಜಾಲ್ಸುರು, ಅರಂತೋಡು, ಕಲ್ಲುಗುಂಡಿ, ಸಂಪಾಜೆ, ಕಲ್ಮಡ್ಕ, ಬೆಳ್ಳಾರೆ, ಪಂಜ, ಗುತ್ತಿಗಾರು, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ ಭಾಗದಲ್ಲೂ ಮಳೆಯಾಗಿದೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಗಡುಗು, ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಐಎಂಡಿ ಮಾಹಿತಿಯ ಪ್ರಕಾರ 31.2 ಡಿ.ಸೆ. ಗರಿಷ್ಠ ಮತ್ತು 24.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿದೆ.
ಇದನ್ನೂ ಓದಿ : ವಿ.ವಿ. ಕಾಲೇಜಿನ ಹಿಜಾಬ್ ವಿವಾದ : ಸಿಂಡಿಕೇಟ್ ನಿರ್ಣಯ ಪಾಲಿಸಲು ಡಿಸಿ ಸೂಚನೆ