Advertisement
ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಸಂಜೆಯವರಗೆ ಮಳೆ ಬಿಡುವು ನೀಡಿತ್ತು. ಬಿಸಿಲು ಮತ್ತು ಮೋಡದ ವಾತಾವರಣ ಇತ್ತು. ಸಂಜೆ ವೇಳೆ ಬಿರುಸು ಮಳೆಯಾಗಿದ್ದು, ಬಳಿಕ ಮಳೆಯ ತೀವ್ರತೆ ಕಡಿಮೆಯಾಗಿತ್ತು.
ಸೋಮವಾರ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಕುಲಶೇಖರದ ಸಿಲ್ವರ್ ಗೇಟ್‌ನ ವೀರನಾರಾಯಣ ಕಟ್ಟೆ ಮನೆಗೆ ಹಾನಿ ಉಂಟಾಗಿದೆ. ಶಾಸಕ ಡಿ. ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related Articles
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜು.10 ರಿಂದ 13ರ ವರೆಗೆ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್’ ಘೊಷಿಸಲಾಗಿದೆ. ಈ ವೇಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಮಂಗಳವಾರ 29.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.5 ಡಿ.ಸೆ. ಏರಿಕೆ ಕಂಡಿತ್ತು. 22.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ.ಸೆ. ಕಡಿಮೆ ಇತ್ತು.
Advertisement