ಮಂಗಳೂರು : ಪೂರ್ವ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 16ರಿಂದ 19ರವರೆಗೆ “ಎಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ರವಿವಾರ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಕೆಲವು ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ. ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ ರವಿವಾರದಂದು 32.4 ಡಿ.ಸೆ. ಗರಿಷ್ಠ ಮತ್ತು 25.3 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಇದನ್ನೂ ಓದಿ : ಉಳ್ಳಾಲ : ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು ; ಆರೋಪಿ ಪತಿ ಬಂಧನ
Related Articles