Advertisement

Rain ನಾಳೆಯಿಂದ ಕರಾವಳಿಯಲ್ಲಿ “ಎಲ್ಲೋ ಅಲರ್ಟ್‌’

12:54 AM Sep 04, 2024 | Team Udayavani |

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ನಾಲ್ಕು ದಿನಗಳ ಕಾಲ “ಎಲ್ಲೋ ಅಲರ್ಟ್‌’ ಘೋಷಣೆ ಮಾಡಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಬಿಟ್ಟುಬಿಟ್ಟು ಸಣ್ಣದಾಗಿ ಮಳೆ ಸುರಿದಿದೆ. ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಹಲವೆಡೆ ಹಗುರ ಮಳೆಯಾಗಿದೆ.

ಸೋಮವಾರ ತಡರಾತ್ರಿ ಉಡುಪಿ, ಮಣಿಪಾಲ ಸಹಿತ ಕೆಲವಡೆ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ 29.7 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.2 ಡಿ.ಸೆ. ಅಧಿಕ ಮತ್ತು 23.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next