Advertisement

Yellur ಗ್ರಾ.ಪಂ. ಅಧ್ಯಕ್ಷರಾಗಿ ರವಿರಾಜ್ ರಾವ್, ಉಪಾಧ್ಯಕ್ಷರಾಗಿ ಉಷಾ ಎನ್. ಅವಿರೋಧ ಆಯ್ಕೆ

04:15 PM Aug 23, 2023 | Team Udayavani |

ಕಾಪು: ಎಲ್ಲೂರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ರವಿರಾಜ್ ರಾವ್ ಮತ್ತು ಉಪಾಧ್ಯಕ್ಷರಾಗಿ ಉಷಾ ಎನ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

14 ಸದಸ್ಯ ಬಲದ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ 9 ಹಾಗೂ ಕಾಂಗ್ರೆಸ್ ಬೆಂಬಲಿತ 5 ಸದಸ್ಯರಿದ್ದಾರೆ.

ಸಾಮಾನ್ಯ ಮೀಸಲಿನಡಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ರವಿರಾಜ್ ರಾವ್ ಮತ್ತು ಉಪಾಧ್ಯಕ್ಷ ಹುದ್ದೆಗೆ ಹಿಂದುಳಿದ ವರ್ಗ ಅ ಮಹಿಳೆ ಮೀಸಲಿನಡಿ ಉಷಾ ಎನ್. ನಾಮಪತ್ರ ಸಲ್ಲಿಸಿದ್ದರು.

3 ನೇ ಸಲ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿರುವ ರವಿರಾಜ್ ರಾವ್ ಮತ್ತು ಪ್ರಥಮ ಸಲ ಸದಸ್ಯರಾಗಿ ಆಯ್ಕೆಯಾಗಿರುವ ಉಷಾ ದಯಾನಂದ್ ಅವರಿಗೆ ಈ ಬಾರಿ ಅದೃಷ್ಟ ಒಲಿದಿತ್ತು.‌

ಎಲ್ಲೂರು ಗ್ರಾ.ಪಂ. ಹಿಂದಿನ ಸಾಲಿನ ಅಧ್ಯಕ್ಷ ಜಯಂತ್ ಕುಮಾರ್ ಮತ್ತು ಇಬ್ಬರು ಕಾಂಗ್ರೆಸ್ ಬೆಂಬಲಿತರ ಸಹಿತವಾಗಿ ಮೂರು ಮಂದಿ ಸದಸ್ಯರು ಗೈರು ಹಾಜರಾಗಿದ್ದರು.

Advertisement

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸಹಾಯಕ ಇಂಜಿನಿಯರ್ ಎಂ. ಸೋಮನಾಥ್ ಚುನಾವಣಾ ಪ್ರಕ್ರಿಯೆ ನಡೆಸಿದ್ದು ಪಿಡಿಒ ಪ್ರದೀಪ್ ಕುಮಾರ್ ಸಹಕರಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ‌ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿ.ಪಂ. ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಪಕ್ಷದ ಮುಖಂಡರಾದ ಅರುಣ್ ಶೆಟ್ಟಿ ಪಾದೂರು, ಗಂಗಾಧರ ಸುವರ್ಣ, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ನಾಗೇಶ್ ರಾವ್, ಗ್ರಾ.ಪಂ. ಮಾಜಿ‌ ಅಧ್ಯಕ್ಷರಾದ ವೈ. ಯಶವಂತ್ ಶೆಟ್ಟಿ, ವಸಂತಿ ಮಧ್ವರಾಜ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next