Advertisement

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ನಿವಾಸದ ಮೇಲೆ ಇಡಿ ದಾಳಿ: ಲುಕ್ ಔಟ್ ನೋಟಿಸ್ ಜಾರಿ

10:58 AM Mar 08, 2020 | Mithun PG |

ಮುಂಬೈ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ನ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಹಾಗೂ ಮಾಜಿ ಸಿಇಓ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ತಡರಾತ್ರಿ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಈಗಾಗಲೇ ನಷ್ಟದಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಶನ್ (ಡಿಎಚ್ ಎಫ್ ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಯೆಸ್ ಬ್ಯಾಂಕ್ ಡಿಎಚ್‌ ಎಫ್‌ ಎಲ್‌ ಗೆ ನೂರಾರು ಕೋಟಿ ಮೌಲ್ಯದ ಸಾಲವನ್ನು ಒದಗಿಸಿದೆ ಎಂದು ಇಡಿ ಮೂಲಗಳು ತಿಳಿಸಿವೆ ಎಮದು ವರಿದಿಯಾಗಿದೆ. ಈ ಸಾಲವೇ  ಎನ್‌ ಪಿ ಎಗಳಾಗಿ ಬದಲಾಗಿ ನಂತರ ಬ್ಯಾಂಕಿಗೆ ನಷ್ಟವಾಗಲು ಕಾರಣವಾಯಿತು ಎಂದು ಹೇಳಲಾಗಿದೆ.

ಅಕ್ರಮ ಹಣ ವಹಿವಾಟು ಕಾಯ್ದೆ (ಪಿಎಂಎಲ್ ಎ) ಅಡಿಯಲ್ಲಿ ಕಪೂರ್ ವಿರುದ್ದ ಈಗಾಗಲೇ ಪ್ರಕರಣ ದಾಖಲಾಗಿದೆ. ಮಾತ್ರವಲ್ಲದೆ ರಾಣಾ ಕಪೂರ್ ದೇಶ ತೊರೆಯದಂತೆ ಲುಕ್ ಔಟ್ ನೋಟಿಸ್ ನೀಡಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ತನ್ನ ಆರ್ಥಿಕ ಸ್ಥಿತಿಯಲ್ಲಿ ಗಂಭೀರ ಕುಸಿತದಿಂದಾಗಿ ತೊಂದರೆಗೀಡಾದ ಖಾಸಗಿ ವಲಯದ ಯೆಸ್ ಬ್ಯಾಂಕ್‌ನ ಮೇಲೆ ಹಿಡಿತ ಸಾಧಿಸಿದ ಕೆಲವೇ ಗಂಟೆಗಳ ನಂತರ ಇಡಿ ರಾಣಾ ಕಪೂರ್ ನಿವಾಸದ ಮೇಲೆ ದಾಳಿ ನಡೆಸಿದೆ.

Advertisement

ಯೆಸ್ ಬ್ಯಾಂಕಿನಲ್ಲಿ ಪ್ರಸ್ತುತ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾದ ಅಂಶಗಳನ್ನು ಪರಿಶೀಲಿಸಲು ಮತ್ತು ವೈಯಕ್ತಿಕ ಜವಾಬ್ದಾರಿಗಳನ್ನು ನಿಯೋಜಿಸಲು ಸರ್ಕಾರ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು  ಮಾಹಿತಿ ಕೇಳಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next