Advertisement

ನಿನ್ನೆ 3 ಕೋವಿಡ್ ಪಾಸಿಟಿವ್‌

10:47 AM Jul 06, 2020 | Suhan S |

ಚಿತ್ರದುರ್ಗ: ಕೋವಿಡ್ ಭೀತಿ ಕೋಟೆನಾಡಲ್ಲಿ ಮುಂದುವರೆದಿದ್ದು, ಭಾನುವಾರದ ವರದಿಯಲ್ಲಿ ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದೆ.

Advertisement

ಚಳ್ಳಕೆರೆ, ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಚಿತ್ರದುರ್ಗ ಪ್ರಯೋಗಾಲಯದಲ್ಲಿ ಪರೀಕ್ಷಿಸಿದ ನಂತರ ಖಚಿತತೆಗಾಗಿ ಮೂರು ಜನರ ಗಂಟಲು ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಈ ಮೂಲಕ ಸೋಂಕಿತರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ. 48 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 35 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಳೆ ಮೂವರು ಗುಣಮುಖರಾಗಿ ಬಿಡುಗಡೆ ಆಗಲಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ನ್ಯಾಯಾಲಯ ಸಿಬ್ಬಂದಿಗೆ ಪಾಸಿಟಿವ್‌: ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡುವ ಬೆರಳಚ್ಚುಗಾರರೊಬ್ಬರಿಗೆ ಸೋಂಕು ದೃಢಪಟ್ಟಿದ್ದರಿಂದ ಇಬ್ಬರು ಹಿರಿಯ ಸಿವಿಲ್‌ ನ್ಯಾಯಾಧಿಧೀಶರು ಸೇರಿ 40 ಜನರನ್ನು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಪ್ರಾಥಮಿಕ ಸಂಪರ್ಕಿತರಲ್ಲಿ ಪೊಲೀಸರು, ನ್ಯಾಯಾಲಯದ ಸಿಬ್ಬಂದಿ ಇದ್ದಾರೆ. ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯವನ್ನು ಭಾನುವಾರ ಸ್ಯಾನಿಟೈಸ್‌ ಮಾಡಲಾಗಿದೆ. ಮೂಲತಃ ಹಿರಿಯೂರಿನವರಾಗಿರುವ ಬೆರಳಚ್ಚುಗಾರ ನೌಕರ ನಿತ್ಯವೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಓಡಾಡುತ್ತಿದ್ದರು. ನ್ಯಾಯಾಧೀಶರ ಪೀಠದ ಸಮೀಪ ಕುಳಿತು ಕೆಲಸ ಮಾಡುತ್ತಿದ್ದರು. ಜೂನ್‌ 29ರಂದು ಮಧ್ಯಾಹ್ನ ಇವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಗಂಟಲು ದ್ರವದ ಮಾದರಿ ಸಂಗ್ರಹಿಸಿದ್ದರು. ಅಂದಿನಿಂದ ಇವರು ಗೃಹ ಕ್ವಾರಂಟೆ„ನ್‌ನಲ್ಲಿದ್ದರು. ಏಳು ದಿನಗಳ ಬಳಿಕ ವರದಿ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next