Advertisement

ದೆಹಲಿ: ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ

11:25 AM Sep 01, 2021 | Team Udayavani |

ನವದೆಹಲಿ: ಇತ್ತೀಚೆಗಷ್ಟೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದ್ದು, ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಬಾಪಾ ನಗರ್ ಪ್ರದೇಶದಲ್ಲಿ ನಾಲ್ಕು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ವರದಿಯಾಗಿದೆ.

Advertisement

ಇದನ್ನೂ ಓದಿ:ಕಾಬೂಲ್: ಮೃತ ದೇಹ ನೇತು ಹಾಕಿ ಕಾಪ್ಟರ್‌ ಹಾರಾಟ ನಡೆಸಿದ ತಾಲಿಬಾನ್ ಉಗ್ರರು?

ದೆಹಲಿಯ ಪ್ರಸಾದ್ ನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ದೀಪೇಶ್ ಎಂದು ಗುರುತಿಸಲಾಗಿದೆ. ಈ ಕಾಮುಕ ಮಗುವಿನ ಮನೆ ಸಮೀಪ ಇರುವ ಜೀನ್ಸ್ ತಯಾರಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ವರದಿ ತಿಳಿಸಿದೆ.

ಮಗು ಆಟವಾಡುವ ವೇಳೆ ಆಗಾಗ ಫ್ಯಾಕ್ಟರಿ ಸಮೀಪ ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಮಗುವಿಗೆ ಚಾಕೋಲೇಟ್ ನೀಡುವುದಾಗಿ ಸುಳ್ಳು ಹೇಳಿ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಗು ಪೋಷಕರಿಗೆ ವಿಷಯ ತಿಳಿಸಿದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಏತನ್ಮಧ್ಯೆ ಆರೋಪಿಗೆ ಬಾಲಕಿಯ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ಜನರು ಹಿಗ್ಗಾಮುಗ್ಗಾ ಥಳಿಸಿರುವುದಾಗಿ ವರದಿ ವಿವರಿಸಿದೆ.

Advertisement

ಪೊಲೀಸರು ಆರೋಪಿ ವಿರುದ್ಧ ಪೋಕ್ಸೊ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆತನನ್ನು ಜೈಲಿಗೆ ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next