ಅರಸೀಕೆರೆ: ಎತ್ತಿನ ಹೊಳೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಂತ್ರಸ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ ನೀಡಿದರು.
ಜಿಲ್ಲಾಡಳಿತ ಹಾಗೂ ಎತ್ತಿನ ಹೊಳೆ ಯೊಜನೆ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಹಾರನಹಳ್ಳಿ ಯಲ್ಲಿ ಗುರುವಾರ ನಡೆದ ಎತ್ತಿನಹೊಳೆ ಕಾಮಗಾರಿ ಅನುಷ್ಠಾನಕ್ಕಾಗಿ ಶೇ.50ಕ್ಕೂ ಹೆಚ್ಚು ಕೃಷಿಭೂಮಿಯನ್ನ ಕಳೆದುಕೊಂಡ ರೈತರ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯ ಪಟ್ಟಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
7 ಜಿಲ್ಲೆಗಳಿಗೆ ವರದಾನ: ಸತತ ಬರಗಾಲ ಪೀಡಿತ ಪ್ರದೇಶವಾದ ಮಧ್ಯ ಕರ್ನಾಟಕ ವ್ಯಾಪ್ತಿಯ ಏಳು ಜಿಲ್ಲೆ ಹಾಗೂ 29 ತಾಲೂಕುಗಳಿಗೆ ಎತ್ತಿನಹೊಳೆ ಯೋಜನೆ ವರದಾನವಾಗಿದೆ ಎಂದರು.ಈಗಾಗಲೇ ಕಾಮಗಾರಿ ಬಿರುಸಿನಿಂದ ಸಾಗಿದೆ. ಶೇ.50 ಕ್ಕೂ ಹೆಚ್ಚು ಭೂಮಿ ಕಳೆದುಕೊಂಡ ರೈತರಿಗೆ ಪುನರ್ವಸತಿ ಕಲ್ಪಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.
ಪರಿಹಾರ ತಾರತಮ್ಯ ಸರಿಪಡಿಸಲು ಆಗ್ರಹ: ಈ ವೇಳೆ ಮಧ್ಯ ಪ್ರವೇಶಿಸಿದ ಜಿಲ್ಲಾ ರೈತ ಸಂಘದ ಸಂಚಾಲಕ ಪ್ರಸನ್ನ ಕುಮಾರ್ ಮಾತನಾಡಿ ಎತ್ತಿನಹೊಳೆ ಕಾಮಗಾರಿಗೆ ಭೂಮಿ ಕಳೆದುಕೊಂಡ ಕೆಲ ರೈತರ ಹೆಸರು ಫಲಾನುಭವಿಗಳಪಟ್ಟಿಯಲ್ಲಿ ಕಾಣುತ್ತಿಲ್ಲ. ಸಕಲೇಶ ಪುರ ಮಾದರಿಯಲ್ಲೇ ತಾಲೂಕಿನ ರೈತರಿಗೂ ಪರಿಹಾರ ದೊರಕಬೇಕು ಹಾಗೂ ಒಂದೇ ಕಂತಿನಲ್ಲಿ ಪರಿಹಾರದ ಹಣ ರೈತರ ಖಾತೆಗೆ ಜಮಾ ಆಗಬೇಕು ಎಂದು ಸಭೆಯ ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಶಿವಲಿಂಗೇಗೌಡ ಸರಕಾರಿ ಯೋಜನೆ ಹಾಗೂ ಜನಪರ ಕಾರ್ಯಗಳಿಗೆ ಸರಕಾರ ವಶಪಡಿಸಿಕೊಳ್ಳುವ ಭೂಮಿಗೆ ಸರಕಾರ ಕೆಲವು ಮಾನದಂಡಗಳನ್ನು ನಿಗದಿ ಮಾಡಿ ಪರಿಹಾರವನ್ನು ನೀಡುತ್ತದೆ. ಇದನ್ನು ಉಲ್ಲಂ ಸಲು ಯಾರಿಂದಲೂ ಸಾಧ್ಯ ವಿಲ್ಲ ಎಂದರು. ಕ್ಷೇತ್ರದ ಶಾಸಕನಾಗಿ ತಾವಿದ್ದು, ನನ್ನ ಕ್ಷೇತ್ರದ ಜನತೆಗೆ ಅನ್ಯಾಯವಾಗಲೂ ಎಂದಿಗೂ ನಾನು ಬಿಡುವುದಿಲ್ಲ. ಜನಪರ ಕಾಮಗಾರಿಯ ಅನುಷ್ಠಾನಕ್ಕೆ ಸರ್ವರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.
ಅಧಿಕಾರಿ ಭರವಸೆ: ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ ಕೃಷಿ ಭೂಮಿ ಕಳೆದುಕೊಂಡ ರೈತರಿಗೆ ಅನ್ಯಾಯವಾಗದಂತೆ ಸೂಕ್ತ ರೀತಿಯಲ್ಲೇ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.
ಸಂತ್ರಸ್ತರೊಂದಿಗೆ ಸಮಾಲೋಚನೆ: ಎತ್ತಿನಹೊಳೆ ವಿಶೇಷ ಭೂಸ್ವಾದೀನ ಅಧಿಕಾರಿ ಗಿರೀಶ್ ನಂದನ್ ಮಾತ ನಾಡಿ, ಈಗಾಗಲೇ ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರೊಂದಿಗೆ ಹಲವು ಬಾರಿ ಸಮಾಲೋಚನೆ ಮಾಡಲಾಗಿದೆ. ಯೋಜನೆಗೆ ಭೂಮಿ ನೀಡಿರುವ ರೈತರ ಹೆಸರು ಮತ್ತು ಸ್ವಾಧೀನವಾಗಿರುವ ಭೂಮಿಯ ಪ್ರಮಾಣ ಮತ್ತು ದೊರೆಯಬೇಕಾದ ಪರಿಹಾರ ಡಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಬಿಟ್ಟಿದ್ದರೆ ಸೂಕ್ತ ದಾಖಲೆ ನೀಡಿದರೆ ಅಂತಹ ರೈತರ ಹೆಸರನ್ನು ಫಲಾನುಭವಿಗಳ ಪಟ್ಟಿಗೆ ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.
ತಹಶೀಲ್ದಾರ್ ಸಂತೋಷ್‌ಕುಮಾರ್ ಎತ್ತಿನಹೊಳೆ ಯೋಜನೆ ಎಇಇ ಸುರೇಂದ್ರಾಚಾರ್, ಹಾರನಹಳ್ಳಿ ಗ್ರಾಪಂ ಅಧ್ಯಕ್ಷ ಯೋಗೀಶ್, ಮಾಜಿ ಅಧ್ಯಕ್ಷ ಕರೀಮ್ ಸಾಬ್, ಗ್ರಾಪಂ ಸದಸ್ಯ ಗುರುಮೂರ್ತಿ ಇದ್ದರು