ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಲುಸರ್ಕಾರ ಬದ್ಧವಾಗಿದ್ದು, ಮುಂದಿನ ಮೂರೂವರೆ ವರ್ಷಗಳ ಅವಧಿಯಲ್ಲಿ ಜಿಲ್ಲೆಗೆ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಭರವಸೆ ನೀಡಿದರು.
ನಗರದಲ್ಲಿ ತಾಲೂಕು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ 77ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಸಿಎಂ ಬಳಿ ಮನವಿ: ಈ ಭಾಗದ ಜನರಿಗೆ ಎತ್ತಿನಹೊಳೆ ಯೋಜನೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರತಿಯೊಂದು ಸಚಿವ ಸಂಪುಟ ಸಭೆಯಲ್ಲಿ ಒತ್ತಾಯಮಾಡುತ್ತಿದ್ದು, ಮುಂದಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿ ಸಲು ಅಗತ್ಯ ಅನುದಾನ ಮೀಸಲಿಡಲು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದೇನೆ ಎಂದರು. ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆಎಚ್.ಎನ್.ವ್ಯಾಲಿ ಯೋಜನೆ ಮೂಲಕ ಶುದ್ಧೀಕರಿಸಿದ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ26ಕೆರೆಗಳಿಗೆ ನೀರು ಹರಿಸಲಾಗಿದೆ. ಈ ಹಿಂದೆಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದರು.
ಪಿಎಲ್‌ಡಿಬ್ಯಾಂಕ್ ಸಣ್ಣಕಟ್ಟಡದಿಂದ ಸುಸಜ್ಜಿತಕಟ್ಟಡದಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಸಂತೋಷ ತಂದಿದೆ. ನಮ್ಮ ಆಶಯಕ್ಕೆ ಪೂರಕವಾಗಿ ಬ್ಯಾಂಕ್‌ನ ಆಡಳಿತ ಮಂಡಳಿ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.
ತಾಲೂಕಿನಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಹೆಚ್ಚಾಗಿದ್ದು, ಅವರಿಗೆವಾಣಿಜ್ಯಬೆಳೆ ಬೆಳೆಯಲುಪ್ರೋತ್ಸಾಹ ನೀಡಬೇಕಿದೆ. ಆಪೆಲ್,ಡ್ರಾಗನ್ ಫ್ರೊಟ್, ವನೀಲಾ ಬೆಳೆಯುವ ಪ್ರಗತಿಪರ ರೈತರು ನಮ್ಮಲ್ಲಿದ್ದಾರೆ. ಅವರಿಗೆ ಬ್ಯಾಂಕ್ ಬೆನ್ನೆಲುಬು ಆಗಬೇಕಿದೆ. ದ್ರಾಕ್ಷಿ ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿ ಈಗಾಗಲೇ ತೋಟಗಾರಿಕೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದರು.
ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಬ್ಯಾಂಕ್ ಅಧ್ಯಕ್ಷ ಪಿ.ನಾಗೇಶ್, ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜು, ತಾಪಂ ಅಧ್ಯಕ್ಷ ರಾಮಸ್ವಾಮಿ,ಮರಳಕುಂಟೆ ಕೃಷ್ಣಮೂರ್ತಿ, ಮುಖಂಡರಾದ ಗೋವಿಂದ ಸ್ವಾಮಿ, ಚನ್ನಕೇಶವ ರೆಡ್ಡಿ, ನಾಗೇಶ್, ಮೋಹನ್, ಪಿಳ್ಳಪ್ಪ, ಮಿಲ್ಟನ್ ವೆಂಕಟೇಶ, ನಾರಾಯಣಪ್ಪ, ಅಶ್ವತ್ಥಪ್ಪ, ಕೊಂಡಪ್ಪ, ನಾಗೇಶ್, ಕೃಷ್ಣಮೂರ್ತಿ, ಚಂದ್ರಣ್ಣ, ರಾಜಣ್ಣ, ಕೃಷ್ಣಾರೆಡ್ಡಿ, ನಾರಾಯಣಪ್ಪ, ಆನಂದ್, ತಿರುಮಲಪ್ಪ, ಆನಂದ್, ಸಾವಿ ತ್ರಮ್ಮ, ಮಂಜುಳಾ, ನಾಗೇಶ್, ಗವಿಯಪ್ಪ, ವೆಂಕಟಸ್ವಾಮಿ, ಲವಣ್ಣ, ನಂಜುಂಡಪ್ಪ,ಕಾಳೇಗೌಡ, ಮುನಿಸ್ವಾಮಿ, ಪ್ರಸಾದ್ ಹಾಗೂ ಬ್ಯಾಂಕ್ ಸದಸ್ಯರು ಉಪಸ್ಥಿತರಿದ್ದರು.