Advertisement
ನಗರದಲ್ಲಿ ಶುಕ್ರವಾರ ಸ್ಥಳೀಯ ಒಕ್ಕಲಿಗರ ಸಂಘದಿಂದ ನಡೆದ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಡಿ ತಜ್ಞರ ವರದಿ ಪ್ರಕಾರ 24 ಟಿಎಂಸಿ ನೀರು ಸಿಗಲಿದೆ. ಮುಖ್ಯವಾಗಿ ಎತ್ತಿನಹೊಳೆ ಯೋಜನೆಯನ್ನು ಕೋಲಾರ, ಚಿಕ್ಕಬಳ್ಳಾಫುರ ಜಿಲ್ಲೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ ಪೈಪ್‌ಲೈನ್ ಮೂಲಕ ನೀರು ಹರಿಸುವುದು ವಿಳಂಬ ಆಗುತ್ತದೆ ಎಂಬ ಕಾರಣಕ್ಕೆ ಜತೆಗೆ ಯೋಜನೆಯ ಬಹುಪಾಲು ನೀರು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಿಗಬೇಕೆಂಬ ಉದ್ದೇಶದಿಂದ ಪೈಪ್‌ಲೈನ್ ಬದಲಾಗಿ ತೆರೆದ ಕಾಲುವೆ ಮೂಲಕ ಹರಿಸಲು ನಿರ್ಧರಿಸಲಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ರೈತರು ಶ್ರಮ ಜೀವಿಗಳಾಗಿದ್ದಾರೆ. 15,00, 2,000 ಅಡಿಗಳ ಅಳದಿಂದ ನೀರು ತೆಗೆದು ಉತ್ತಮ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಎರಡು ಜಿಲ್ಲೆಗಳಲ್ಲಿ ಬೆಳೆಯುವ ಹಣ್ಣು, ತರಕಾರಿ, ಹಾಲು, ರೇಷ್ಮೆ ಇಡೀ ದೇಶಕ್ಕೆ ಪೂರೈಕೆ ಆಗುತ್ತದೆ. ಜಿಲ್ಲೆಯ ರೇಷ್ಮೆ ರಾಮನಗರ ಜಿಲ್ಲೆಗಿಂತ ಹೆಚ್ಚಿಗೆ ಗುಣಮಟ್ಟದಿಂದ ಕೂಡಿದೆ. ಜಿಲ್ಲೆಗೆ ತನ್ನದೇ ಆದ ಇತಿಹಾಸ ಇದೆ. ಆದರೆ ಶಾಶ್ವತ ನೀರಾವರಿ ಇಲ್ಲದೇ ರೈತರು ತೀರಾ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಶೀಘ್ರಗತಿಯಲ್ಲಿ ಎತ್ತಿನಹೊಳೆ ನೀರನ್ನು ಈ ಭಾಗಕ್ಕೆ ಹರಿಸಬೇಕೆಂಬ ನಿಟ್ಟಿನಲ್ಲಿ ಪ್ರಾಮಾಣಿಕ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ರೈತರ ಧ್ವನಿಯಾಗಿ, ಜನ ಸಾಮಾನ್ಯರ ಅಶೋತ್ತರಗಳಿಗೆ ಸ್ವಂದಿಸಿ ಕೆಲಸ ಮಾಡಲಿದೆ ಎಂದು ಹೇಳಿದರು.
Related Articles
ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರಾಗಿದ್ದರೂ ಕಾಮಗಾರಿ ಆರಂಭಗೊಂಡಿಲ್ಲ. ಈ ಸರ್ಕಾರದಲ್ಲಿ ವೈದ್ಯಕೀಯ ಕಾಲೇಜು ಕನಸು ನನಸಾಗಬೇಕಿದೆ. ಕಾಲೇಜು ಸ್ಥಾಪಿಸಿ ಕೆಂಪೇಗೌಡರ ಹೆಸರು ನಾಮಕಾರಣ ಮಾಡಬೇಕು ಎಂದು ಶಾಸಕ ಸುಧಾಕರ್ ಮನವಿ ಮಾಡಿದರು. ಇದಕ್ಕೆ ಸ್ವಂದಿಸಿದ ಸಚಿವ ಡಿ.ಕೆ.ಶಿವಕುಮಾರ್, ಕಾಲೇಜು ನಿರ್ಮಾಣಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸುವ ಭರವಸೆ ನೀಡಿದರು.
Advertisement