Advertisement

ಯೋಗದಿಂದ ಮನಸ್ಸು, ಆರೋಗ್ಯಕ್ಕೆ ಸುಯೋಗ: ಶಾಸಕ ವೇದವ್ಯಾಸ ಕಾಮತ್‌

11:57 PM Jun 21, 2024 | Team Udayavani |

ಮಂಗಳೂರು:ಯೋಗದಿಂದ ಮನಸ್ಸು ಹಾಗೂ ಅರೋಗ್ಯಕ್ಕೆ ಬಹುದೊಡ್ಡ ಲಾಭ ಸಿಗಲಿದ್ದು, ಜೀವನಕ್ಕೆ ಸುಯೋಗ ಪ್ರಾಪ್ತಿಯಾಗುತ್ತದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್‌ ಹೇಳಿದರು.

Advertisement

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ಜಿಲ್ಲಾ ಆಯುಷ್‌ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯುಷ್‌ ವಿದ್ಯಾಲಯಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಶುಕ್ರವಾರ ನಗರದ ಕುದು¾ಲ್‌ ರಂಗರಾವ್‌ ಪುರಭವನದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮನಸ್ಸು, ಬುದ್ಧಿಯನ್ನು ಸರಿದಾರಿಯಲ್ಲಿ ನಡೆಸಲು ಅಧ್ಯಾತ್ಮ ಹಾಗೂ ಆರೋಗ್ಯಕ್ಕೆ ಯೋಗ ಪೂರಕ ಎಂದವರು ವಿಶ್ಲೇಷಿಸಿದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ| ವೈ. ಭರತ್‌ ಶೆಟ್ಟಿ, ಮಹಾನಗರಪಾಲಿಕೆ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ., ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್‌ ಕೆ., ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಸಿ.ಬಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ, ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕಿ ಡಾ|ಜೆಸಿಂತಾ, ಜಿಲ್ಲಾ ಆಯುಷ್‌ ಅಧಿಕಾರಿ ಮೊಹಮ್ಮದ್‌ ಇಕ್ಬಾಲ್‌ ಮುಂತಾದವರು ಉಪಸ್ಥಿತರಿದ್ದರು.

ಬಳಿಕ ಯೋಗ ಗುರು ಡಾ| ಗೋಪಾಲಕೃಷ್ಣ ದೇಲಂಪಾಡಿ ನೇತೃತ್ವದಲ್ಲಿ ಯೋಗ ನಡೆಯಿತು.

Advertisement

ವಿವಿಧ ಆಯುಷ್‌ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಸದಸ್ಯರು, ಯೋಗಪಟುಗಳು ಯೋಗ ಪ್ರದರ್ಶನ ನೀಡಿದರು. ಶಾಸಕರು, ಮೇಯರ್‌, ಜಿಲ್ಲಾಧಿಕಾರಿ ಹಾಗೂ ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಗೆ ಸಾಥ್‌ ನೀಡಿದರು.

ದ.ಕ. ಜಿಲ್ಲಾದ್ಯಂತ ಆಚರಣೆ
ದ.ಕ. ಜಿಲ್ಲಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ವಿವಿಧ ಸಂಘಟನೆಗಳು, ಆಯುಷ್‌ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು, ಪೊಲೀಸ್‌ ಇಲಾಖೆ, ಗೃಹರಕ್ಷಕ ದಳದವರು, ಎನ್‌ಸಿಸಿ ವಿದ್ಯಾರ್ಥಿಗಳು, ಎನ್‌ಡಿಆರ್‌ಎಫ್‌, ವಿಶ್ವವಿದ್ಯಾನಿಲಯ, ಎನ್ನೆಸ್ಸೆಸ್‌ ಘಟಕ ವಿದ್ಯಾರ್ಥಿಗಳು, ಸಾರ್ವಜನಿಕರು ವಿವಿಧೆಡೆ ಸಾಮೂಹಿಕ ಯೋಗಾಭ್ಯಾಸ ಮಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next