Advertisement

ವಿವಿಗಳಲ್ಲಿ ಯೋಗ ಕೋರ್ಸ್‌

10:57 PM Jun 21, 2019 | Lakshmi GovindaRaj |

ಮೈಸೂರು: ರಾಜ್ಯದ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗವನ್ನು ಕಡ್ಡಾಯವಾಗಿ ಕಲಿಸಲು ಗಂಭೀರ ಚಿಂತನೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

Advertisement

ಮೈಸೂರಿನ ರೇಸ್‌ಕೋರ್ಸ್‌ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಡ್ರಮ್‌ ಬಾರಿಸುವ ಮೂಲಕ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯದ ಕಾಲೇಜುಗಳಲ್ಲಿ ಯೋಗವನ್ನು ಕಡ್ಡಾಯವಾಗಿ ಕಲಿಸಲು ಗಂಭೀರ ಚಿಂತನೆ ಮಾಡಲಾಗಿದೆ.

ಈಗಾಗಲೇ ಕುಲಪತಿಗಳ ಜತೆ ಚರ್ಚೆ ಮಾಡಿದ್ದೇನೆ. ಕೆಲವು ಕಡೆ ಯೋಗ ಶಿಕ್ಷಣ ಆರಂಭವಾಗಿದೆ. ಎಲ್ಲ ಕಡೆ ಆರಂಭಿಸಲು ಕಡ್ಡಾಯ ಮಾಡುವ ಬಗ್ಗೆ ಚಿಂತನೆ ಮಾಡಿದ್ದೇವೆ. ಮುಂದಿನ ಬಾರಿ ನಗರದಲ್ಲಿ ನಡೆಯುವ ಯೋಗ ದಿನಾಚರಣೆಯನ್ನು ಗಿನ್ನಿಸ್‌ ರೆಕಾರ್ಡ್‌ಗೆ ಸೇರಿಸಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು. 30 ಸಾವಿರಕ್ಕೂ ಹೆಚ್ಚು ಮಂದಿಯಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.

ವಿಯೇಟ್ನಾಂ ದೇಶದ ತಮ್‌ ಎಂಬ ಮಹಿಳೆ ಆಸಕ್ತಿಯಿಂದ ಯೋಗದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಯೋಗ ಪ್ರದರ್ಶನ ಮುಗಿದ ನಂತರ ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿದರು. ನಗರದಲ್ಲಿ ನಡೆದ ಯೋಗ ಸಂಭ್ರಮವನ್ನು ಡ್ರೋಣ್‌ ಕ್ಯಾಮರಾದಲ್ಲಿ ಚಿತ್ರೀಕರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next