Advertisement

ಪದವಿ ಕಾಲೇಜುಗಳಲ್ಲಿ ಯೋಗ ಕೋರ್ಸ್‌ ಕಡ್ಡಾಯ

07:00 AM Aug 03, 2018 | Team Udayavani |

ಬೆಂಗಳೂರು: ರಾಜ್ಯದ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣದಲ್ಲಿ ಪ್ರಸಕ್ತ ವರ್ಷದಿಂದ ಯೋಗ ಕೋರ್ಸ್‌, ತರಗತಿಗಳನ್ನು ಕಡ್ಡಾಯವಾಗಿ ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

Advertisement

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ವಿಭಾಗದ ಅಧಿಕಾರಿಗಳೊಂದಿಗೆ ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಸಿಸಿ ಮಾದರಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಕಾಲೇಜು ಹಾಗೂ ವಿಶ್ವವಿದ್ಯಾಲ¿ಗಳ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಕಾಲೇಜುಗಳಲ್ಲಿ ಯೋಗ ತರಗತಿ, ಕೋರ್ಸ್‌ಗಳನ್ನು ಆರಂಭಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಮಂಗಳೂರು ವಿವಿಯಲ್ಲಿ ಸಂಶೋಧನಾ ಅಭ್ಯರ್ಥಿಗಳ ಸಂಖ್ಯೆ 330ರಿಂದ 1,115ಕ್ಕೆ ಏರಿಕೆಯಾಗಿದೆ. ವಿವಿಯ ಸಂಶೋಧನಾ ಕೇಂದ್ರಗಳಲ್ಲಿ ಈವರೆಗಿನ ಸಂಶೋಧನಾ ಪ್ರಬಂಧಗಳ ದೊಡ್ಡ ಸಂಗ್ರಹವಿದೆ. ಅಭ್ಯರ್ಥಿಯೊಬ್ಬರು ಸಂಶೋಧನೆ ಉತ್ತೀರ್ಣರಾಗಲು ಸರ್ಕಾರ ಐದು ವರ್ಷದಲ್ಲಿ 15 ಲಕ್ಷ ರೂ. ವೆಚ್ಚ ಮಾಡುತ್ತದೆ. ಹಾಗೆಯೇ ವಿದ್ಯಾರ್ಥಿಯೊಬ್ಬ ಪದವಿ ಪಡೆಯಲು 4 ಲಕ್ಷ ರೂ. ವೆಚ್ಚ ಮಾಡುತ್ತದೆ. ಉಪನ್ಯಾಸಕರಿಂದ ಪ್ರಾಧ್ಯಾಪಕರಿಗೆ 60,000 ರೂ.ನಿಂದ 2 ಲಕ್ಷ ರೂ.ವರೆಗೆ ವೇತನ ನೀಡಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಸರ್ಕಾರ ಹಣ ವೆಚ್ಚ ಮಾಡುತ್ತಿದ್ದು, ಈ ಸಂಶೋಧನೆಗಳ ಫ‌ಲಿತಾಂಶಗಳ ಬಳಕೆ, ಕೌಶಲ್ಯಾಧಾರಿ ಶಿಕ್ಷಣ ಕಲ್ಪಿಸಲು ಅಗತ್ಯ  ಮಾಹಿತಿ ಪಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next