Advertisement

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

10:56 AM Jun 21, 2021 | Team Udayavani |

ಬೆಂಗಳೂರು: ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

Advertisement

ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿರು.

ಮನುಕುಲದ ಮಾನಸಿಕ- ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ. ಮಕ್ಕಳ ಏಕಾಗ್ರತೆ ಮತ್ತು ಬೆಳವಣಿಗೆಗೆ ಇದು ಅತಿ ಹೆಚ್ಚು ಪರಿಣಾಮಕಾರಿ ಎಂದರು.

ಇದನ್ನೂ ಓದಿ:ಸಾಂಕ್ರಾಮಿಕದ ಸವಾಲು ಎದುರಿಸಲು ಯೋಗಾಭ್ಯಾಸದ ಪಾತ್ರ ಪ್ರಮುಖ: ಬಿಎಸ್ ಯಡಿಯೂರಪ್ಪ

ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯವನ್ನಾಗಿ ಅಳವಡಿಸುವ ಅಂಶವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ವಹಿಸಿದೆ. ಮಕ್ಕಳು ಆರಂಭದಿಂದಲೇ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸುವುದರ ಜತೆಗೆ, ಯೋಗದ ಮೂಲಕ ದೈಹಿಕ-ಮಾನಸಿಕವಾಗಿ ಸದೃಢರಾಗಲಿದ್ದಾರೆ ಎಂದು ಡಿಸಿಎಂ ಹೇಳಿದರು.

Advertisement

ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಒಲಿಂಪಿಕ್‌ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಗೋವಿಂದರಾಜು ಅವರು ಯೋಗವನ್ನು ಶಿಕ್ಷಣದ ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ಡಿಸಿಎಂ ಸ್ಪಂದಿಸಿ ಈ ಪ್ರತಿಕ್ರಿಯೆ ನೀಡಿದರು.

ಯೋಗ ಸೀಮಿತವಾದುದಲ್ಲ: ಯೋಗ ದಿನಾಚರಣೆಗೆ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು, “ಯೋಗವು ಯಾವುದೇ ದೇಶ, ಜಾತಿ, ಧರ್ಮಕ್ಕೆ ಸೀಮಿತವಾದುದ್ದಲ್ಲ. ಇದು ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು. ಮನುಷ್ಯನನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯಲು ನಮ್ಮ ಹಿರಿಯರು ಸಂಶೋಧಿಸಿದ ವಿಜ್ಞಾನವೇ ಯೋಗ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next