ಬೀದರ್: ನಗರದ ಐತಿಹಾಸಿಕ ಬಹುಮನಿ ಕೋಟೆ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ ಮತ್ತು ಆಯುಷ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಲಾಯಿತು.
ಕೇಂದ್ರ ಸರ್ಕಾರ ಈ ವರ್ಷ ಯೋಗ ದಿನಾಚರಣೆಯನ್ನು ಪಾರಂಪರಿಕ ಕಟ್ಟಡಗಳಲ್ಲಿ ಆಚರಿಸುವ ಕುರಿತು ನಿರ್ದೇಶನ ಹಿನ್ನಲೆ ಕೋಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಚಾಲನೆ ನೀಡಿದರು. ಯೋಗ ಪರಿಣಿತರು ವಿವಿಧ ಭಂಗಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
ಇದನ್ನೂ ಓದಿ:ಯೋಗದಿಂದ ಪ್ರಪಂಚದ ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ಮೈಸೂರಿನಲ್ಲಿ ಪ್ರಧಾನಿ ಮೋದಿ
ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಎಸ್.ಪಿ ಕಿಶೋರ ಬಾಬು, ಉದ್ಯಮಿ ಗುರುನಾಥ ಕೊಳ್ಳುರ್, ಹೆಚ್ಚುವರಿ ಡಿಸಿ ಶಿವಕುಮಾರ ಶೀಲವಂತ ಮತ್ತಿತರರು ಇದ್ದರು.