Advertisement

ಯೋಗ ದಿನ: ಪಥ ಸಂಚಲನಕ್ಕೆ ಚಾಲನೆ

10:21 AM Jun 21, 2022 | Team Udayavani |

ಕಲಬುರಗಿ: ಮಂಗಳವಾರ ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಯೋಗ ಪಥಸಂಚಲನಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಆಯುಷ್‌ ಇಲಾಖೆ ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಯೋಗ ಪಥಸಂಚಲನ ಆಯೋಜಿಸಲಾಗಿತ್ತು.
ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್‌ ಶಾಸಕ ಶಶೀಲ ಜಿ. ನಮೋಶಿ, ಗುಲಬರ್ಗಾ ವಿ.ವಿ ಕುಲಪತಿ ಪ್ರೊ| ದಯಾನಂದ ಅಗಸರ್‌, ಶ್ರೀ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಮುಖ್ಯಸ್ಥೆ ದಾಕ್ಷಾಯಣಿ ಅವ್ವ, ಕಾರ್ಯದರ್ಶಿ ಬಸವರಾಜ ದೇಶಮುಖ, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಗಿರಿಜಾ ಎಸ್‌.ಯು., ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಕಲಬುರಗಿ ವಲಯದ ನಿರ್ದೇಶಕ ರಾಜಯೋಗಿ ಬಿ.ಕೆ. ಪ್ರೇಮ್‌, ಪತಂಜಲಿ ಯೋಗ ಸಂಸ್ಥೆಯ ಶಿವಾನಂದ ಸಾಲಿಮಠ, ಯೋಗ ಉಪನ್ಯಾಸಕ ಚಂದ್ರಕಾಂತ ಬಿರಾದಾರ ಸೇರಿದಂತೆ ಮೊದಲಾದವರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next