Advertisement

ಯೋಗ ದಿನಾಚರಣೆ ಸಕಲ ಸಿದ್ಧತೆಗೆ ಸೂಚನೆ

09:07 PM Jun 17, 2019 | Lakshmi GovindaRaj |

ಚಾಮರಾಜನಗರ: ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದಲ್ಲಿ ವ್ಯವಸ್ಥಿತವಾಗಿ ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ನಗರದ ಪೊಲೀಸ್‌ ಪೆರೇಡ್‌ ಮೈದಾನದಲ್ಲಿ ಏರ್ಪಡಿಸಲಾಗಿದೆ.

ಯೋಗ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಅಗತ್ಯವಿರುವ ಎಲ್ಲಾ ಸಿದ್ಧತೆ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಮೈದಾನಕ್ಕೆ ನೆಲಹಾಸು, ಧ್ವನಿವರ್ಧಕ, ದಾಖಲಾತಿ ವ್ಯವಸ್ಥೆ ಮತ್ತು ಪ್ರಾತ್ಯಕ್ಷಿಕೆ ಮಾಡಲು 2 ಕಡೆ ವೇದಿಕೆ ವ್ಯವಸ್ಥೆ ಮಾಡಬೇಕು. ಯೋಗ ಪ್ರದರ್ಶನ ನೀಡುವವರಿಗೆ ಲಘು ಉಪಾಹಾರ ವ್ಯವಸ್ಥೆ ಮಾಡಲು ಸೂಚಿಸಿದರು.

ಸರ್ಕಾರದ ಸೂಚನೆಯಂತೆ ಆಯೋಜಿಸಿ: ಸರ್ಕಾರದ ಸೂಚನೆಯಂತೆ ಕಾರ್ಯಕ್ರಮವನ್ನು ಆಯೋಜಿಸಲು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಸರ್ಕಾರೇತರ ಸಂಘ-ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್‌ ಮಾತನಾಡಿ, ನಗರದ ಜೋಡಿ ರಸ್ತೆಯಿಂದ ಪೊಲೀಸ್‌ ಕವಾಯಿತು, ಮೈದಾನದವರೆಗೆ ಸ್ವತ್ಛತೆ ಕೈಗೊಳ್ಳಲು ತಿಳಿಸಿದರು.

Advertisement

ಈ ವೇಳೆ ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಆರ್‌.ರಾಚಯ್ಯ, ಚಾಮರಾಜನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌.ಲಕ್ಷ್ಮೀಪತಿ, ಎಸ್‌.ಪಿ.ವೈ.ಎಸ್‌.ಎಸ್‌ ಅಧ್ಯಕ್ಷ ಎಚ್‌.ಜಿ ಕುಮಾರಸ್ವಾಮಿ, ಆಯುಷ್‌ ಇಲಾಖೆಯ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ಕೊತಬಾಳ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next