Advertisement

ಬಾಗಲಕೋಟೆ: ಯೋಗ ಮಾಡುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು !

12:14 PM Jun 21, 2018 | Team Udayavani |

ತೇರದಾಳ: ಅಂತರಾಷ್ಟ್ರೀಯ ಯೋಗ ದಿನದಂದು ಯೋಗಾಸನ ಮಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. 

Advertisement

ಗುರುಪುರ ಕ್ಯಾಂಪಸ್‌ನ  ಎಸ್‌.ಜೆ. ಹೆಣ್ಣು ಮಕ್ಕಳ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿದ್ದು, ಶಿಕ್ಷಕ ವಿಶ್ವನಾಥ ಬಿರಾದರ್‌ (50) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. 

ಯೋಗಾಸನ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next