Advertisement

ದೈಹಿಕ-ಮಾನಸಿಕ ಆರೋಗ್ಯಕ್ಕೆ ಯೋಗ ಅಗತ್ಯ

05:03 PM Jun 22, 2021 | Team Udayavani |

ಬಾಗಲಕೋಟೆ: ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗದೊಂದಿಗೆ ಮನೆಯಲ್ಲಿರಿ ಎಂಬ ಘೋಷವಾಕ್ಯದೊಂದಿಗೆ ಆನ್‌ಲೈನ್‌ನಲ್ಲಿ ಮೂಲಕ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 2015 ರಿಂದ ಪ್ರತಿ ವರ್ಷವು ಜೂನ್‌ -21 ರಂದು ಅಂತಾರಾಷ್ಟೀಯ ಯೋಗ ದಿನಾಚರಣೆಯನ್ನು ಪ್ರಧಾನ ಮಂತ್ರಿಗಳು ವಿಶ್ವ ಯೋಗ ದಿನವನ್ನಾಗಿ ಭಾರತ ದೇಶವಲ್ಲದೆ ಇಡಿ ಜಗತ್ತಿಗೆ ಯೋಗದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಕೋವಿಡ್‌-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ವಯ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಜಿಲ್ಲಾ ಆಯುಷ್‌ ಅಧಿಕಾರಿ ಡಾ|ಮಲ್ಲಣ್ಣ ತೋಟದ ಮಾತನಾಡಿದರು. ವಿಶ್ವ ಯೋಗ ದಿನಾಚರಣೆ ಅಂಗವಾಗಿ ಭಾರತ ಸೇವಾದಳದ ಸಹಯೋಗದೊಂದಿಗೆ ಜೂನ್‌ 17ರಿಂದ 21ವರೆಗೆ 5 ದಿನಗಳ ಕಾಲ ಆನ್‌ಲೈನ್‌ ಮೂಲಕ ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ನಂತರ ಜಿಲ್ಲಾ ಸಂಘಟಕ ಮಹೇಶ ಪತ್ತಾರ, ಕಾಮನ್‌ ಯೋಗಾ ಪ್ರೊಟೊಕಾಲ್‌ ಪ್ರಕಾರ ಆನ್‌ಲೈನ್‌ನಲ್ಲಿ ಭಾಗವಹಿಸಿದ ಎಲ್ಲರಿಗೂ ಯೋಗಾಭ್ಯಾಸ ಮಾಡಿಸಿದರು.

ಮನೆಯಲ್ಲಿಯೇ ಯೋಗಾಭ್ಯಾಸ: ಯೋಗದೊಂದಿಗೆ ಮನೆಯಲ್ಲಿರಿ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿರುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆಯುಷ ಅಧಿಕಾರಿ ಡಾ|ಮಲ್ಲಣ್ಣ ತೋಟದ ಹಿರಿಯ ವೈದ್ಯಾಧಿಕಾರಿ ಡಾ|ಚಂದ್ರಕಾಂತ ರಕ್ಕಸಗಿ, ವೈದ್ಯಾಧಿಕಾರಿ ಡಾ|ಶಿವಾನಂದ ನಿಡಗುಂದಿ, ಆಯುಷ ಇಲಾಖೇಯ ಅಧೀಕ್ಷಕರು ಗಿರೀಶ ಕಂಬಳಿ, ವಿನಾಯಕ ಅವ್ವಣ್ಣವರ ಸೇರಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಮನೆಯಲ್ಲಿಯೇ ಯೋಗಾಭ್ಯಾಸ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next