Advertisement
ಯೋಗದಿಂದ ಅಡ್ಡಪರಿಣಾಮವಿಲ್ಲದೆ ರೋಗ ಮುಕ್ತ ಜೀವನ ಸಂಪಾದಿಸಬಹುದು ಎಂಬುದನ್ನು ವಿಶ್ವಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಭಾರತದ್ದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ವ್ಯಾಖ್ಯಾನಿಸಿದರು.
Related Articles
Advertisement
ಇದನ್ನೂ ಓದಿ:ಮಂಗಳೂರು: ಬೆಂಕಿಗಾಹುತಿಯಾದ ಕಾರು: ಮಹಿಳೆ, ನಾಯಿ ಪಾರು
ಬ್ಯಾಂಕ್ ಆಫ್ ಬರೋಡಾದ ಮಂಗಳೂರು ವಲಯದ ಮುಖ್ಯಸ್ಥ ಆರ್. ಗೋಪಾಲಕೃಷ್ಣ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಧರ್ಮಸ್ಥಳದ ಸೇವೆ ಶ್ಲಾಘನೀಯ ಎಂದರು.
ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತರಾಮ ತೋಳ್ಪಡಿತ್ತಾಯ, ಯೋಗ ನಿರ್ದೇಶಕ ಡಾ| ಐ. ಶಶಿಕಾಂತ ಜೈನ್ ಉಪಸ್ಥಿತರಿದ್ದರು.
ಉಜಿರೆಯ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ (ಸಿಎನ್‌ವೈಎಸ್) ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ ಶೆಟ್ಟಿ ವಂದಿಸಿದರು. ಪ್ರೊ| ಜೋಸ್ನಾ ಕಾರ್ಯಕ್ರಮ ನಿರ್ವಹಿಸಿದರು.
ಆರೋಗ್ಯ ಸಂಬಂಧಿಸಿದ ಸ್ವಯಂಪರೀಕ್ಷೆ ಕೈಗೊಳ್ಳಬಹುದಾದ ವೈದ್ಯ ಕೀಯ ಕಿಟ್ ಅನ್ನು ಐವರಿಗೆ ಸಾಂಕೇತಿಕವಾಗಿ ವಿತರಿಸಲಾಯಿತು. 500ಕ್ಕೂ ಅಧಿಕ ಮಂದಿ ಸಾಧಕರಿಂದ ಯೋಗ ಪ್ರದರ್ಶನ ನಡೆಯಿತು. ಧರ್ಮಸ್ಥಳದಿಂದ ಆರೋಗ್ಯದಾನ
ಯೋಗದ ಮೂಲಕ ನೈಜ ಆರೋಗ್ಯವನ್ನು ಕಂಡುಕೊಳ್ಳಬಹುದು ಎಂಬುದನ್ನು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಶರು ವಿಶ್ವದ ದೊಡ್ಡ ರಾಷ್ಟ್ರಗಳಿಗೆ ಪ್ರಚುರಪಡಿಸಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳವು ಅನೇಕ ದಾನಾದಿಗಳೊಂದಿಗೆ ರಾಜ್ಯಾದ್ಯಂತ 26 ವರ್ಷಗಳಿಂದ ವಿವಿಧ ಆರೋಗ್ಯ ಸಂಬಂಧಿಸಿದ ಸೇವೆಗಳನ್ನು ನೀಡುತ್ತ ರೋಗಮುಕ್ತರಾಗಲು ಆರೋಗ್ಯ ದಾನ ಮಾಡುತ್ತಿದೆ. ಕಾರ್ಕಳ ತಾಲೂಕಿನಲ್ಲಿ ಎ. 16ರಿಂದ ಎ. 24ರ ವರೆಗೆ 5,000 ಮಂದಿಗೆ ಯೋಗ ಶಿಬಿರ ಹಮ್ಮಿಕೊಂಡಿದೆ ಎಂದು ಡಾ| ಹೆಗ್ಗಡೆ ತಿಳಿಸಿದರು.