Advertisement
ಹಾಸನ: ಯೋಗ ಎಂಬುದು ಮನುಷ್ಯರ ಆರೋಗ್ಯದ ಸಮತೋಲನಕ್ಕೆ ಮದ್ದು. ದೇಹ ಮತ್ತು ಮನಸ್ಸನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಯೋಗ ಸಹಕಾರಿ ಎಂದು ಶಾಸಕ ಪ್ರೀತಂ ಜೆ.ಗೌಡ ತಿಳಿಸಿದರು.
Related Articles
Advertisement
ದೇಶದಲ್ಲಿ ಶಾಂತಿ ನೆಲೆಸಿ ಸಮಾಜದಲ್ಲಿ ಒಂದು ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು. ಯೋಗದಿಂದ ಅನೇಕ ಕಾಯಿಲೆಗಳಿಂದ ದೂರ ಇರಬಹುದು. ಯೋಗ ಮೈಗೂಡಿಸಿಕೊಂಡರೆ ನಿರ್ಮಲವಾದ ಮನಸ್ಸು ಹಾಗೂ ಚಿಂತನೆಗಳಲ್ಲೂ ಬದಲಾವಣೆ ಕಾಣಬಹುದು ಎಂದರು.
ಪತಂಜಲಿ ಪರಿವಾರದಿಂದ ಪ್ರಾರಂಭಿಸಿರುವ ವಾರ್ತಾ ಪತ್ರವನ್ನು ಜಿಲ್ಲಾಧಿಕಾರಿ ಅಕ್ರಂಪಾಷಾ ಇದೇ ವೇಳೆ ಬಿಡುಗಡೆಗೊಳಿಸಿದರು. ಬೆಳಗ್ಗೆ 7ಕ್ಕೆ ಪ್ರಾರಂಭವಾದ ಯೋಗದಲ್ಲಿ ಶಾಸಕರು, ಜಿಲ್ಲಾಧಿಕಾರಿ, ಜಿಪಂ ಉಪಾಧ್ಯಕ್ಷರು, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪೊಲೀಸ್ ಇಲಾಖೆ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಿದರು.
ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್‌ಮೂರ್ತಿ ವಿವಿಧ ಆಸನದ ಮಹತ್ವ ಬಗ್ಗೆ ತಿಳಿಸಿದರು. ಪತಂಜಲಿ ಪರಿವಾರದ ಯೋಗ ಪಟುಗಳು ಮತ್ತು ಸಾವಿರಾರು ಜನರು ಒಂದು ಗಂಟೆಗಳ ಕಾಲ ಯೋಗಾಸನದಲ್ಲಿ ಪಾಲ್ಗೊಂಡಿದ್ದರು. ಪತಂಜಲಿ ಯೋಗ ಸಮಿತಿ ಜಿಲ್ಲಾ ಮಾರ್ಗದರ್ಶಕರಾದ ಪ್ರಭಾರಿ ಹರಿಹರಪುರ ಶ್ರೀಧರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಎಸ್ಪಿ ಪ್ರಕಾಶ್‌ಗೌಡ, ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜು, ಅಪರ ಜಿಲ್ಲಾಧಿಕಾರಿ ವೈಶಾಲಿ, ಜಿಪಂ ಉಪಾಧ್ಯಕ್ಷ ಎಚ್.ಪಿ.ಸ್ವರೂಪ್, ಹಾಸನ ತಾಪಂ ಅಧ್ಯಕ್ಷ ನಿಂಗೇಗೌಡ, ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ.ಪ್ರಸನ್ನ ಎನ್.ರಾವ್, ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಹಿರಿಯ ಪತ್ರಕರ್ತರಾದ ಆರ್.ಪಿ.ವೆಂಕಟೇಶ್ ಮೂರ್ತಿ, ಉದಯ್ ಕುಮಾರ್, ಸ್ವಾತಂತ್ರ ಹೋರಾಟಗಾರ ಶಿವಣ್ಣ, ಭಾರತ್ ಸ್ವಾಭಿಮಾನ್ ಟ್ರಸ್ಟ್ ಜಿಲ್ಲಾ ಪ್ರಭಾರಿ ಶೇಷಪ್ಪ ಇದ್ದರು.