Advertisement

ಕೋವಿಡ್ ಆಸ್ಪತ್ರೆಯಲ್ಲೊಬ್ಬ ಯೋಗಗುರು

10:41 AM Jul 17, 2020 | Suhan S |

ಬಳ್ಳಾರಿ: ಕೋವಿಡ್ ಸೋಂಕಿತರಾಗಿ ಬಳ್ಳಾರಿಯ ವಿಮ್ಸ್‌ ಸರ್ಕಾರಿ ದಂತ ಮಹಾವಿದ್ಯಾಲಯದಲ್ಲಿ 8 ದಿನಗಳ ಹಿಂದೆ ದಾಖಲಾಗಿರುವ ಕಂಪ್ಲಿ ಪುರಸಭೆಯ ಸದಸ್ಯ ಚಾಂದಪಾಶಾ ಅವರು ಸೋಂಕಿತರಿಗೆ ಯೋಗಾಸನದ ವಿವಿಧ ಭಂಗಿಗಳು ಹಾಗೂ ಸೂರ್ಯ ನಮಸ್ಕಾರಗಳನ್ನು ಕಲಿಸುವುದರ ಜತೆಗೆ ನೈತಿಕ ಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನಸೆಳೆಯುತ್ತಿದ್ದಾರೆ.

Advertisement

ತಾವು ಅಲ್ಪಸಂಖ್ಯಾತ ಸಮುದಾಯದವರಲ್ಲವೇ ಎಂದು ಸೋಂಕಿತ ವ್ಯಕ್ತಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಚಾಂದ್‌ಪಾಶಾ ಅವರು, ಮೊದಲು ನಾನು ಭಾರತೀಯ. ನನಗೆ ಯಾವುದೇ ಧರ್ಮವಿಲ್ಲ ಎಂದು ಹೇಳುವ ಮೂಲಕ ತನ್ನಲ್ಲಿನ ದೇಶಭಕ್ತಿಯನ್ನು ಹೊರಹಾಕಿದ್ದಾರೆ. ಕಳೆದ 8 ದಿನಗಳಿಂದಲೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಯೋಗ ಹಾಗೂ ಸೂರ್ಯನಮಸ್ಕಾರ ಕಲಿಸುವುದರ ಜತೆಗೆ ತನ್ನೊಂದಿಗೆ ಚಿಕಿತ್ಸೆಗೆ ದಾಖಲಾಗಿರುವವರಿಗೆ ಸ್ವತಃ ತನ್ನದೇ ಖರ್ಚಿನಲ್ಲಿ ಕಷಾಯಕ್ಕೆ ಸಂಬಂಧಿ ಸಿದ ಸಾಮಗ್ರಿಗಳನ್ನು ಖರೀದಿಸಿ ತನ್ನ ಕೈಯಾರೆ ಪ್ರತಿನಿತ್ಯ ಕಷಾಯ ಸಿದ್ಧಪಡಿಸಿ 50 ಜನರಿಗೆ ಕುಡಿಸುತ್ತಿದ್ದಾರೆ.

14 ವರ್ಷಗಳಿಂದಲೂ ಈ ರೀತಿಯ ಯೋಗಾಸನ ಮತ್ತು ಸೂರ್ಯನಮಸ್ಕಾರ ಹಾಗೂ ವಿವಿಧ ರೀತಿಯ ಸಂಸ್ಕೃತ ಶ್ಲೋಕಗಳನ್ನು ಪಠಿಸುತ್ತಿದ್ದೇನೆ. ಈ ಕೊರೊನಾವೇನು ದೊಡ್ಡ ರೋಗವಲ್ಲ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೇವೆ ಎಂದು ತಿಳಿಸುವ ಚಾಂದಪಾಶಾ ಇನ್ನೂ ಮೂರ್‍ನಾಲ್ಕು ದಿನಗಳಲ್ಲಿ ಕೊರೊನಾ ಮಾರಿಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗಲಿದ್ದಾರೆ. ನಿಜಕ್ಕೂ ಈ ವ್ಯಕ್ತಿ ಅದ್ಭುತ ಸ್ಪೂರ್ತಿ ನಮಗೆಲ್ಲರಿಗೂ ಎಂದು ವಿಮ್ಸ್‌ ಸರ್ಕಾರಿ ದಂತ ಕಾಲೇಜಿನ ಕೋವಿಡ್‌ ನೋಡಲ್‌ ಅಧಿಕಾರಿ ಡಾ.ರಾಘವೇಂದ್ರ ಅವರು ಸಂತಸ ವ್ಯಕ್ತಪಡಿಸುತ್ತಾರೆ. ಚಾಂದಪಾಶಾ ಅವರು ವಿವಿಧ ಯೋಗಾಸನದ ಆಸನಗಳ ವಿಡಿಯೋ ಗಮನಿಸಿದ್ದೇನೆ. ಅವರು ಹೇಳುವ ಸ್ಫೂರ್ತಿಯುತ ಮಾತುಗಳನ್ನ ಆಲಿಸಿದೆ ತುಂಬಾ ಸಂತೋಷವಾಯ್ತು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್‌. ಎಸ್‌.ನಕುಲ್‌ ಅವರು ಸಹ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next