Advertisement

ಯೋಗರಾಜ್ ಭಟ್ ಅವರಿಂದ ಚುನಾವಣಾ ಗೀತೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ

02:20 PM Mar 31, 2018 | |

ಮೊಟ್ಟಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2018 ತನ್ನದೇ ಆದ ಗೀತೆ ಹೊಂದಲಿದೆ. ಈ ಚುನಾವಣಾ ಗೀತೆ ಪಾರದರ್ಶಕ ಮತದಾನ ಉತ್ತೇಜಿಸಲಿದ್ದು ಹೆಚ್ಚು ಮತದಾರರನ್ನು ಸೆಳೆಯಲಿದೆ. ಈ ಗೀತೆಯನ್ನು ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ರಚಿಸಿ ನಿರ್ದೇಶಿಸುತ್ತಿದ್ದಾರೆ. ಯೋಗರಾಜ್ ಭಟ್ ತಮ್ಮ ಜನಪ್ರಿಯ ಗೀತರಚನೆಗೆ ಪ್ರಸಿದ್ಧರಾಗಿದ್ದು ಈ ಚುನಾವಣಾ ಗೀತೆ ಕೂಡಾ ಜನಪ್ರಿಯವಾಗುವ ನಿರೀಕ್ಷೆ ಇದೆ.

Advertisement

ಚುನಾವಣಾ ಗೀತೆಗೆ ಸಂಗೀತ ಸಂಯೋಜನೆಯನ್ನು ಖ್ಯಾತ ಸಂಗೀತ ನಿರ್ದೇಶಕ ಹರಿಕೃಷ್ಣ ಮಾಡಲಿದ್ದು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ಅವರ ತಂಡದ ಗಾಯಕರು ಹಾಡಲಿದ್ದಾರೆ. ಖ್ಯಾತ ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ನೃತ್ಯ ಸಂಯೋಜನೆ ಮಾಡಲಿದ್ದಾರೆ. ಈ ಚುನಾವಣಾ ಗೀತೆಯನ್ನು ಕಳೆದ ಐದು ದಿನಗಳಿಂದ ರಾಜ್ಯದಾದ್ಯಂತ ಚಿತ್ರೀಕರಿಸಲಾಗುತ್ತಿದೆ.

ಶುಕ್ರವಾರ ಕಂಠೀರವ ಸ್ಟೇಡಿಯಂ ಮತ್ತು ವಿಧಾನಸೌಧಗಳಲ್ಲಿ ಚಿತ್ರೀಕರಿಸಲಾಯಿತು. ಕರ್ನಾಟಕದ ನೂರಾರು ಸಾಂಸ್ಕೃತಿಕ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಚುನಾವಣಾ ಗೀತೆಯ ಎಲ್ಲ ಗೌರವ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಸಲ್ಲಬೇಕು. ಅವರು ಈ ಚುನಾವಣೆಗಳಿಗೆ ಚುನಾವಣಾ ಗೀತೆ ಸಿದ್ಧಪಡಿಸಲು ಉತ್ಸಾಹ ತೋರಿದರು.

ನಾವು ವಿಕಲಚೇತನರು, ಆದಿವಾಸಿಗಳು, ತೃತೀಯ ಲಿಂಗಿಗಳು ಮತ್ತು ಯುವ ಮತದಾರರನ್ನು ಈ ಚುನಾವಣಾ ಗೀತೆಯ ಚಿತ್ರೀಕರಣಕ್ಕೆ ಬಳಸಿಕೊಳ್ಳುತ್ತಿದ್ದೇವೆ’ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಶ್ರೀ ಸಂಜೀವ್ ಕುಮಾರ್, ಈ ಚುನಾವಣಾ ಗೀತೆ ಆಯೋಗದ ಧ್ಯೇಯ- ಒಳಗೊಳ್ಳುವ, ಸುಗಮ ಮತ್ತು ನೈತಿಕ ಚುನಾವಣೆಗಳ ಅನುಸಾರ ಇದೆ.

ಈ ಯೋಜನೆ ಕುರಿತು ನಾವು ಬಹಳ ಕಾಲ ಸಂಶೋಧನೆ ನಡೆಸಿದ್ದೇವೆ. ಈ ಗೀತೆ ಜಾಗೃತ ಮತ್ತು ನೈತಿಕ ಮತದಾನವನ್ನು ಉತ್ತೇಜಿಸಲಿದೆ ಮತ್ತು ಇದು ದೊಡ್ಡ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಮತದಾನ ಮಾಡಲು ಪ್ರೇರೇಪಿಸುತ್ತದೆ. ಈ ಗೀತೆಯನ್ನು ರೇಡಿಯೊ, ಟೀವಿ, ಚಲನಚಿತ್ರಗಳು ಮತ್ತಿತರೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಿದ್ದೇವೆ’ ಎಂದರು. 

Advertisement

ನಿರ್ದೇಶಕ ಯೋಗರಾಜ್ ಭಟ್ ಈ ಯೋಜನೆ ಕುರಿತು ಬಹಳ ಸಂತೋಷ ವ್ಯಕ್ತಪಡಿಸಿ, ಈ ಯೋಜನೆ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಹಲವು ವರ್ಷಗಳಿಂದ ನಾನು ಸಮಾಜಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಏನಾದರೂ ಮಾಡಬೇಕೆಂಬ ಬಯಕೆ ಹೊಂದಿದ್ದೆ. ಈ ಚುನಾವಣಾ ಗೀತೆ ಅದನ್ನು ಈಡೇರಿಸಿದೆ. ಈ ಗೀತೆ ವಿಶಿಷ್ಟ ಪರಿಕಲ್ಪನೆಯಾಗಿದ್ದು ಜನರಿಗೆ ನೇರ ಭಾಷಣದ ಮೂಲಕ ನೀಡಲಾಗದ ಉತ್ತೇಜನವನ್ನು ಈ ಗೀತೆ ನೀಡುತ್ತದೆ.

ಗೀತೆಗಳು ಸದಾ ಗ್ರಹಿಸಲು ಸುಲಭ ಮತ್ತು ಮನಸ್ಸಿನಲ್ಲಿ ದೀರ್ಘ ಕಾಲ ಉಳಿಯುವುದರಿಂದ ಇದು ಸಾಧ್ಯವಾಗುತ್ತದೆ. ಆದ್ದರಿಂದ ಜನರು ಚಿತ್ರಗೀತೆಗಳನ್ನು ಬಹಳ ಕಾಲ ನೆನಪಿನಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಈ ಚುನಾವಣಾ ಗೀತೆ ಪ್ರತಿಯೊಬ್ಬರ ಮನದಲ್ಲೂ ಉಳಿದು ಅವರಿಗೆ ಪಾರದರ್ಶಕ ಚುನಾವಣೆಗಳ ಕುರಿತು ಅರಿವು ಮೂಡಿಸುತ್ತದೆ’ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next