Advertisement

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

02:11 PM Jan 10, 2025 | Team Udayavani |

ಯೋಗರಾಜ್‌ ಭಟ್‌ ನಿರ್ದೇಶನದ “ಮನದ ಕಡಲು’ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗಿದೆ. ಯೋಗರಾಜ್‌ ಭಟ್‌ ಅವರೇ ಬರೆದಿರುವ “ತುರ್ರಾ..’ ಹಾಡನ್ನು ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಸಂಜಿತ್‌ ಹೆಗ್ಡೆ ಹಾಗೂ ಪ್ರಾರ್ಥನಾ ಹಾಡಿದ್ದಾರೆ. “ಮನದ ಕಡಲು’ ಚಿತ್ರವನ್ನು ಇ.ಕೃಷ್ಣಪ್ಪ ನಿರ್ಮಾಣ ಮಾಡುತ್ತಿದ್ದಾರೆ.

Advertisement

ಚಿತ್ರದ ಹಾಡಿನ ಬಗ್ಗೆ ಮಾತನಾಡಿದ ಯೋಗರಾಜ್‌ ಭಟ್‌, “ನನ್ನ ಹಾಗೂ ವಿ.ಹರಿಕೃಷ್ಣ ಅವರ ಕಾಂಬೋದಲ್ಲಿ ಅರ್ಥವಿರುವ ಹಾಡುಗಳು ಸಾಕಷ್ಟು ಹಿಟ್‌ ಆಗಿದೆ. ಆದರೆ ಅರ್ಥವಿಲ್ಲದ ಅನರ್ಥದ ಹಾಡುಗಳು ಸೂಪರ್‌ ಹಿಟ್‌ ಆಗಿದೆ. ಆ ಅನರ್ಥದ ಹಾಡುಗಳಿಗೆ ಈ ತುರ್ರಾ ಹಾಡು ಸೇರ್ಪಡೆಯಾಗಿದೆ. ನನ್ನ ಬಾಲ್ಯದಲ್ಲಿ ನಮ್ಮೂರಿನಲ್ಲಿ ಅಲಿಮಾ ಎಂಬ ಹುಚ್ಚ ಇದ್ದ. ಆತನಿಗೆ ಮಕ್ಕಳೆಂದರೆ ಪ್ರೀತಿ. ನಾವೆಲ್ಲಾ ಆತನ ಹಿಂದೆ ಸುತ್ತುತ್ತಿದ್ದೆವು. ಆತ “ಬೊಂಬುವೈ ಟುರ ವೈ’ ಎಂಬ ಪದ ಬಳಸುತ್ತಿದ್ದ. ಆ ಪದವೇ ಈ ತುರ್ರಾ ಹಾಡು ಬರೆಯಲು ಸ್ಫೂರ್ತಿ.ವಿ.ಹರಿಕೃಷ್ಣ ಅವರ ಧ್ವನಿ ಈ ಹಾಡಿಗೆ ಸೂಕ್ತವಾಗಿದೆ. ಅವರ ಜೊತೆಗೆ ಸಂಜಿತ್‌ ಹೆಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ಕನ್ನಡ ಕಲಾಭಿಮಾನಿಗಳು ಈ ಹಾಡನ್ನು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆ ಇದೆ. ಕೃಷ್ಣಪ್ಪ ಅವರ ಈ ತೋಟದಲ್ಲೇ ಚಿತ್ರ ಅರಂಭವಾಗಿದ್ದು, ಇವತ್ತು ಇದೇ ಸ್ಥಳದಲ್ಲೇ ಚಿತ್ರೀಕರಣ ಮುಕ್ತಾಯವಾಗಿ, ಕುಂಬಳಕಾಯಿ ಒಡೆಯಲಾಗಿದೆ’ ಎಂದರು.

“ನಾನು ಸ್ಟುಡಿಯೋದಲ್ಲಿ ತುಂಬಾ ಹೊತ್ತು ಹಾಡಿರುವ ಹಾಡು ಇದೆ. ಲಿರಿಕಲ್‌ ಪೇಜ್‌ ಹಿಡಿದು ಹಾಡುವಾಗ ಪದಗಳನ್ನು ಹೇಳಲು ಬಹಳ ಹೊತ್ತಾಗುತ್ತಿತ್ತು. ಇಂತಹ ಕಷ್ಟದ ಹಾಗೂ ವಿರಳವಾದ ಪದಗಳನ್ನು ಬಳಸಿ ಯೋಗರಾಜ್‌ ಭಟ್‌ ಅವರು ಒಂದೊಳ್ಳೆ ಹಾಡು ಬರೆದಿದ್ದಾರೆ’ ಎನ್ನುವುದು ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮಾತು.

ನಿರ್ಮಾಪಕ ಕೃಷ್ಣಪ್ಪ ಮಾತನಾಡಿ, “ಈ ಹಾಡು ಕೇಳಿದ ತಕ್ಷಣ ಇಷ್ಟವಾಯಿತು. ನಿರ್ದೇಶಕರಿಗೆ ಈ ಹಾಡು ಇರಲಿ ಎಂದು ಹೇಳಿದೆ’ ಎಂದರು. ನಾಯಕ ಸುಮುಖ ಮಾತನಾಡಿ, “ಯೋಗರಾಜ್‌ ಭಟ್‌ ಅವರು ಚಿತ್ರೀಕರಣದ ಸಮಯದಲ್ಲೂ ಇಂತಹ ಪದಗಳನ್ನು

ಬಳಸುತ್ತಿರುತ್ತಾರೆ. ಈಗ ಆ ಪದಗಳನ್ನೇ ಬಳಸಿ ಹಾಡು ಬರೆದಿದ್ದಾರೆ. ಈ ಹಾಡು ತುಂಬಾ ಚೆನ್ನಾಗಿದೆ. ಈ ಜಾಗದಲ್ಲೇ ನಮ್ಮ ಚಿತ್ರ ಆರಂಭವಾಗಿದ್ದು, ಈಗ ಇದೇ ಜಾಗದಲ್ಲಿ ಹಾಡು ಬಿಡುಗಡೆಯಾಗಿರುವುದು ಖುಷಿಯಾಗಿದೆ’ ಎಂದರು. ಹಿರಿಯ ನಟ ದತ್ತಣ್ಣ, ನಟಿ ರಾಶಿಕಾ ಶೆಟ್ಟಿ, ಸಹ ನಿರ್ಮಾಪಕ ಜಿ.ಗಂಗಾಧರ್‌, ಕಾರ್ಯಕಾರಿ ನಿರ್ಮಾಪಕ ಪ್ರತಾಪ್‌ ಹಾಗೂ ಛಾಯಾಗ್ರಾಹಕ ಸಂತೋಷ್‌ ರೈ ಪಾತಾಜೆ ಹಾಡಿನ ಬಗ್ಗೆ ಮಾತನಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next