Advertisement

ಉಡುಪಿಯಲ್ಲಿ ಸೆ.17ರಂದು 15 ಸಾವಿರ ಜನರಿಂದ ಯೋಗಾಥಾನ್‌

04:13 PM Sep 10, 2022 | Team Udayavani |

ಉಡುಪಿ : ಜಿಲ್ಲೆಯಲ್ಲಿ ಸೆ.17ರಂದು 15,000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ನಡೆಯಲಿದೆ. ಈ ಕುರಿತಂತೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ಸೂಚಿಸಿದರು.

Advertisement

ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಯೋಗಾಥಾನ್‌ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ಈಗಾಗಲೇ ಯೋಗವನ್ನು ಶಾಲಾ ಮತ್ತು ಕಾಲೇಜು ಶಿಕ್ಷಣದಲ್ಲಿ ಪಠ್ಯವನ್ನಾಗಿ ಸೇರ್ಪಡೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ರಾಜ್ಯಾದ್ಯಂತ ಸೆ. 17ರಂದು ಏಕಕಾಲದಲ್ಲಿ 5 ಲಕ್ಷ ಜನರಿಂದ ಯೋಗಾಸನವನ್ನು ಆಯೋಜಿಸಿದ್ದು, ಉಡುಪಿ ಜಿಲ್ಲೆಯಿಂದ 15,000 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮಣಿಪಾಲದ ಮಾಹೆ ಕ್ರೀಡಾಂಗಣದಲ್ಲಿ ಯೋಗಾಥಾನ್‌ ಆಯೋಜಿಸಲಾಗಿದ್ದು 45 ನಿಮಿಷಗಳ ಕಾಲ ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಲಿದೆ. ತಹಶೀಲ್ದಾರ್‌ ಶ್ರೀನಿವಾಸ ಮೂರ್ತಿ, ಡಿಡಿಪಿಐ ಶಿವರಾಜ, ಡಿಡಿಪಿಯು ಮಾರುತಿ, ಲೀಡ್‌ ಕಾಲೇಜು ಪ್ರಾಂಶುಪಾಲ ಡಾ| ಭಾಸ್ಕರ್‌ ಶೆಟ್ಟಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಇದನ್ನೂ ಓದಿ : ಯಡಿಯೂರಪ್ಪ ಕೃಷ್ಣನಂತೆ ಬೊಮ್ಮಾಯಿ ಅರ್ಜುನನಂತೆ; ಯಾತ್ರೆ ಶುರುವಾಗಿದೆ: ನಳಿನ್ ಕಟೀಲ್

Advertisement

Udayavani is now on Telegram. Click here to join our channel and stay updated with the latest news.

Next