Advertisement
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಯೋಗಥಾನ್-2022 ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗಥಾನ್ ಕಾರ್ಯಕ್ರಮ ಯಶಸ್ವಿಗೆ ಜಿಲ್ಲೆಯಲ್ಲಿ ವಿವಿಧ ಸಮಿತಿ ರಚಿಸಿ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. ಈ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
Related Articles
Advertisement
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠಲ ಜಾಬಗೌಡ್ರ ಮಾತನಾಡಿ, ಸೆ. 17 ರಂದು ನಡೆಯುವ ಯೋಗಥಾನ್-2022 ಕಾರ್ಯಕ್ರಮದಲ್ಲಿ ವಿವಿಧ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು, ವಸತಿ ನಿಲಯದ ವಿದ್ಯಾರ್ಥಿಗಳು, 350ಕ್ಕೂ ಹೆಚ್ಚು ಯೋಗ ಶಿಕ್ಷಕರು ಹಾಗೂ ಯೋಗ ಸಂಸ್ಥೆಗಳು, ಸಾರ್ವಜನಿಕರು ಸೇರಿದಂತೆ ಒಟ್ಟು 26,000 ಯೋಗಾಸಕ್ತರು ತಮ್ಮ ಹೆಸರನ್ನು ಈಗಾಗಲೇ ನೋಂದಾಯಿಸಿದ್ದಾರೆ. ಇನ್ನೂ ಹೆಸರು ನೋಂದಾಯಿಸಲು ಅವಕಾಶವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಸಕ್ತರು ಹೆಸರು ನೋಂದಾಯಿಸುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದರು.
ಸಭೆಯಲ್ಲಿ ಉಪಹಾರ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ವೇದಿಕೆ ಕಾರ್ಯಕ್ರಮ, ಭದ್ರತೆ, ಆಮಂತ್ರಣ ಪತ್ರಿಕೆ ಮುದ್ರಣ, ವೈದ್ಯಕೀಯ ಸೌಲಭ್ಯ, ಮಾರ್ಗದರ್ಶನದ ಫಲಕಗಳು, ಸ್ವಚ್ಛತಾ ಕಾರ್ಯ, ಮೂಲಸೌಕರ್ಯ ಕುರಿತಂತೆ ರಚಿಸಲಾದ ಸಮಿತಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ಚರ್ಚಿಸಲಾಯಿತು.
ಆಯುಷ್ ಇಲಾಖೆ ಅಧಿಕಾರಿ ಡಾ| ಉಪ್ಪಿನ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಾಂಬ್ಳೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ಸಮನ್ವಯಾಧಿಕಾರಿ ಬಡಿಗೇರ, ನೆಹರು ಯುವ ಕೇಂದ್ರ ಸಮನ್ವಯಾಧಿಕಾರಿ ರಜನಿ ವಾರ್ತಾಧಿಕಾರಿ ವಸಂತ ಮಡ್ಲೂರ, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.