Advertisement

Yogesh Gowda Case: ವಿನಯ್‌ ಕುಲಕರ್ಣಿಗೆ ಸು.ಕೋರ್ಟ್‌ನಲ್ಲಿ ಹಿನ್ನಡೆ

11:38 PM Jun 10, 2024 | Team Udayavani |

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯ ಜಿ.ಪಂ. ಕ್ಷೇತ್ರದ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುದೀರ್ಘ‌ ಕಾನೂನು ಹೋರಾಟ ನಡೆಸುತ್ತಿರುವ ಮಾಜಿ ಸಚಿವ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ ಆಗಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್‌ ನ್ಯಾಯಾಲಯದ ಪ್ರಕ್ರಿಯೆಯನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್‌, ಈ ಸಂಬಂಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿದೆ.

ವಿಚಾರಣ ನ್ಯಾಯಾಲಯದ ಕ್ರಮವನ್ನು ಎತ್ತಿಹಿಡಿದಿದ್ದ ಹೈಕೋರ್ಟಿನ ತೀರ್ಪನ್ನು ಪ್ರಶ್ನಿಸಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ| ಪಿ.ವಿ.ಸಂಜಯ್‌ಕುಮಾರ್‌ ಹಾಗೂ ನ್ಯಾ| ಆಗಸ್ಟಿನ್‌ ಜಾರ್ಜ್‌ ಮಸೀಹ್‌ ಅವರ ನ್ನೊಳಗೊಂಡ ನ್ಯಾಯಪೀಠ, ಕರ್ನಾ ಟಕ ಹೈಕೋರ್ಟ್‌ನ ತೀರ್ಪಿನಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿತು.

ಅಲ್ಲದೇ ವಿನಯ್‌ ಕುಲಕರ್ಣಿ ಪರ ವಕೀಲರ ವಾದವನ್ನು ಅಲ್ಲಗಳೆದಿರುವ ನ್ಯಾಯಪೀಠ, ಇದು ವಜಾಗೊಳಿಸಲು ಅರ್ಹವಾದ ಪ್ರಕರಣವಲ್ಲ. 5 ತಿಂಗಳ ಅವಧಿಯಲ್ಲಿ ಪ್ರಕರಣ ಪ್ರಮುಖ ಆರೋಪಿ (ಎ1) ಹಾಗೂ ಅರ್ಜಿದಾರ ವಿನಯ್‌ ಕುಲಕರ್ಣಿ ನಡುವೆ 57 ಬಾರಿ ಫೋನ್‌ ಸಂಭಾಷಣೆ ನಡೆದಿದೆ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next